

ಧಾರವಾಡ: ಟೆಂಪೋ ಟ್ರಾವೆಲರ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಧಾರವಾಡ ಹೊರವಲಯದ ಇಟ್ಟಿಗಟ್ಟಿ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಮೃತರು ದಾವಣಗೆರೆ ಮೂಲದವರು ಎಂದು ತಿಳಿದುಬಂದಿದೆ. ವೀಣಾ, ರಾಜೇಶ್ವರಿ, ಮಂಜುಳಾ ಸೇರಿ ಒಟ್ಟು 9 ಜನ ಮೃತಪಟ್ಟಿದ್ದು, ಮಾಹಿತಿ ಇನ್ನಷ್ಟೇ ಬರಬೇಕಿದೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಪಣಜಿಗೆ ಹೋಗುತಿತ್ತು. ಲಾರಿ ಬೆಳಗಾವಿಯಿಂದ ಬರುತ್ತಿತ್ತು. ಈ ವೇಳೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಟೆಂಪೋ ಟ್ರಾವೆಲರ್ನಲ್ಲಿದ್ದ 9 ಮಂದಿ ದಾರುಣಾವಾಗಿ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಎಸ್ಪಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)