ಮಾವು ಮೇಳ 14ರಿಂದ

26BGDWDMANGO
Published on

ಧಾರವಾಡ: ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಮೇ ೧೪ರಿಂದ ೧೬ರವರೆಗೆ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗುತ್ತಿದೆ. ಮೇಳದಲ್ಲಿ ಮಳಿಗೆ ಹಾಕಲು ಆಸಕ್ತ ಬೆಳೆಗಾರರಿಂದ ಅರ್ಜಿ ಅಹ್ವಾನಿಸಲಾಗಿದೆ. ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆದು, ಬೆಳೆ ದೃಢೀಕರಣ, ಎಫ್‌ಐಡಿ ಸಂಖ್ಯೆ ಹಾಗೂ ಪಹಣಿಯೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಮೇ ೯ರೊಳಗೆ ಸಲ್ಲಿಸಬೇಕು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net