ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡಿಎಚ್‌ಒ ಭೇಟಿ

dho visit
Published on

ಮಡಿಕೇರಿ: ಚೇರಂಬಾಣೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಅವರು ಬುಧವಾರ ಭೇಟಿ ನೀಡಿ ಆಡಳಿತ್ಮಾಕ ಕುಂದುಕೊರತೆಗಳ ಕುರಿತು ಮಾಹಿತಿ ಪಡೆದು ಸಲಹೆ ನೀಡಿದರು.

ಇಲಾಖಾ ನಿಯಮಗಳನ್ನು ಅನುಸರಿಸುವ ಮೂಲಕ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಸಾಧಿಸುವ ಬಗ್ಗೆ ಸೂಚನೆ ನೀಡಿದರು. ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಪ್ರತಿ ತಿಂಗಳು ವೈದ್ಯರು ಮತ್ತು ಸಿಬ್ಬಂದಿಯವರ ಸಭೆ ನಡೆಸಿ ಉತ್ತಮ ಸೇವೆ ಕಲ್ಪಿಸುವಂತೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪಾರ್ವತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕೃತಾಂಭ, ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಡಾ.ಜಿ.ವಿ.ಶ್ರೀನಾಥ್ ಹಾಗೂ ಡಾ.ರಾಜೀವ್, ಡಾ.ಕಿಶೋರ್ ಅವರು ಇದ್ದರು. ಪಿಎಚ್‌ಸಿಒ, ಸಿಎಚ್‌ಒ ಶುಶ್ರೂ?ಣಾಧಿಕಾರಿಗಳು ಮತ್ತು ಆಶಾ ಕಾರ್ಯಕರ್ತರು ಹಾಗೂ ಸಿಬ್ಬಂದಿಗಳು ಇದ್ದರು.

೧೧ಎಂಡಿಕೆ೫

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net