ಧ್ರುವನಾರಾಯಣ್ ನಿಧನ ನಾಡಿಗೆ ನಷ್ಟ

CTD 11 CONGRESS SATAPA-03
Published on

ಚಿತ್ರದುರ್ಗ: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಅವರ ನಿಧನ ನಾಡಿಗೆ ಬಹು ದೊಡ್ಡ ನಷ್ಟ ಉಂಟು ಮಾಡಿದೆ ಎಂದು ಮಾಜಿ ಸಚಿವ ಎಚ್. ಆಂಜನೇಯ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಧ್ರುವನಾರಾಯಣ್ ಸುಸಂಸ್ಕೃತ, ಸಹನಾಮೂರ್ತಿ ಆಗಿದ್ದರು.

ಹೆಚ್ಚು ಓದುವ ಹವ್ಯಾಸವನ್ನು ರೂಢಿಸಿಕೊಂಡಿದ್ದ ಅವರು, ಅಂಬೇಡ್ಕರ್ ಅನುಯಾಯಿಯಾಗಿದ್ದರು. ಅವರ ಅಗಲಿಕೆಯಿಂದ ಶೋಷಿತರ ಪರ ಮಾತನಾಡುವ ಬಹುದೊಡ್ಡ ದನಿ ಇಲ್ಲದಂತಾಗಿದೆ ಎಂದು ಕಂಬನಿ ಮಿಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಕಾರ್ಯಾಧ್ಯಕ್ಷ ಹಾಲಸ್ವಾಮಿ, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಆರ್.ಕೃಷ್ಣಮೂರ್ತಿ, ಪ್ರಧಾನ ಕಾರ‌್ಯದರ್ಶಿ ಡಿ.ಎನ್.ಮೈಲಾರಪ್ಪ, ಬಿ.ಟಿ.ಜಗದೀಶ್, ಕೆ.ಪಿ.ಸಂಪತ್‌ಕುಮಾರ್, ಅನಿಲ್ಕೋಟಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net