ಧ್ವಜನಿಧಿ ಸಂಗ್ರಹದಲ್ಲಿ ಕೊಡಗಿಗೆ ತೃತೀಯ ಸ್ಥಾನ

7mdkd6 - Copy
Published on

ವಿಜಯವಾಣಿ ಸುದ್ದಿಜಾಲ ಮಡಿಕೇರಿ

ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ೨೦೨೧-೨೨ ನೇ ಸಾಲಿನಲ್ಲಿ ’ಧ್ವಜನಿಧಿ’ ಸಂಗ್ರಹದಲ್ಲಿ ಕೊಡಗು ಜಿಲ್ಲೆ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದೆ. ಜಿಲ್ಲೆಯಿದ ೭.೩೨ ಲಕ್ಷ ರೂಪಾಯಿ ಸಂಗ್ರಹವಾಗಿದೆ. ಈ ಹಿನ್ನೆಲೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋತ್, ಗೃಹ ಸಚಿವ ಅರಗ ಜ್ಞಾನೇಂದ್ರ ಕೊಡಗು ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಪರವಾಗಿ ಸೈನಿಕ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಮೇಜರ್ ಡಾ.ಜೆ.ಆರ್.ಬಾಲಸುಬ್ರಮಣ್ಯಂ ಅವರು ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯಂದು ಪಾರಿತೋಷಕ ಪದಕವನ್ನು ರಾಜಭವನದಲ್ಲಿ ರಾಜ್ಯಪಾಲರು ಮತ್ತು ಗೃಹ ಸಚಿವರಿಂದ ಸ್ವೀಕರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net