22ರಂದು ಮಧುಮೇಹ ಉಚಿತ ತಪಾಸಣಾ ಶಿಬಿರ

Published on

ಕೊಳ್ಳೇಗಾಲ: ಪಟ್ಟಣದ ಲಯನ್ಸ್ ಕಮ್ಯುನಿಟಿ ಹಾಲ್‌ನಲ್ಲಿ ಲಯನ್ಸ್ ಕ್ಲಬ್ ಹಾಗೂ ಸುಶೀಲ ಪಾಲಿ ಕ್ಲಿನಿಕ್ ಸಹಯೋಗದಲ್ಲಿ ಸೆ.22 ರಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಧುಮೇಹ ಹಾಗೂ ರಕ್ತದೊತ್ತಡದ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಬಿ.ಚಿಕ್ಕಬಸವಯ್ಯ ತಿಳಿಸಿದ್ದಾರೆ.

ಶಿಬಿರದಲ್ಲಿ ಸುಶೀಲ ಪಾಲಿ ಕ್ಲಿನಿಕ್‌ನ ಡಾ.ಭಾರ್ಗವ್ ರಾಮ್ ಅಚ್ಚಂ ಅವರು ತಪಾಸಣೆ ಮಾಡಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಧುಮೇಹ ಮತ್ತು ರಕ್ತದೊತ್ತಡ ಇರುವಂತಹ ರೋಗಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು. ಶಿಬಿರಕ್ಕೆ ಬರುವವರು ಖಾಲಿ ಹೊಟ್ಟೆಯಲ್ಲಿ ಬರಬೇಕಾಗುತ್ತದೆ. ಲಯನ್ಸ್ ಕ್ಲಬ್ ವತಿಯಿಂದ ಬೆಳಗಿನ ತಿಂಡಿ ಹಾಗೂ ಮಧ್ಯಾಹ್ನದ ಉಪಾಹಾರ ವ್ಯವಸ್ಥೆ ಮಾಡಲಾಗಿದೆ. ಮೊದಲು ಬಂದ 100 ಅಭ್ಯರ್ಥಿಗಳಿಗೆ ಅವಕಾಶ ಇದೆ. ಹೆಚ್ಚಿನ ಮಾಹಿತಿಗಾಗಿ ಮೊ: 9916913721, 9353668681 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net