

ನರಗುಂದ: ಪಟ್ಟಣದ ಹೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ವಿದ್ಯುತ್ಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಏ. 19ರಂದು ಮಧ್ಯಾಹ್ನ 3 ಗಂಟೆಗೆ ಗ್ರಾಹಕರು, ರೈತರು ಹಾಗೂ ಸಾರ್ವಜನಿಕರ ಸಂವಾದ ಸಭೆ ಹಮ್ಮಿಕೊಳ್ಳಲಾಗಿದೆ. ಸಭೆಯಲ್ಲಿ ಗ್ರಾಹಕರು ವಿದ್ಯುತ್ಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ರ್ಚಚಿಸಿ ಸಲಹೆಗಳನ್ನು ನೀಡಬೇಕೆಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.