

ಧಾರವಾಡ: ಬಾಕಿ ವೇತನ ಪಾವತಿ ಹಾಗೂ ಸೇವಾ ಭದ್ರತೆಗೆ ಆಗ್ರಹಿಸಿ ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿ ಸೇವೆ ಸ್ಥಗಿತಗೊಳಿಸಿ ಗುರುವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಆದರೆ, ಜಿಲ್ಲೆಯಲ್ಲಿ ಡಯಾಲಿಸಿಸ್ ಟಕಗಳ ಸೇವೆ ಅಭಾದಿತವಾಗಿದೆ.
ಜಿಲ್ಲೆಯ ಕಲಟಗಿ, ಕುಂದಗೋಳ, ನವಲಗುಂದ ಸರ್ಕಾರಿ ಆಸ್ಪತ್ರೆಗಳು ಹಾಗೂ ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಟಕಗಳಿವೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿ ಸೇವೆ ಸ್ಥಗಿತಕ್ಕೆ ಕರೆ ನೀಡಿದ್ದರೂ, ಜಿಲ್ಲಾ ಆಸ್ಪತ್ರೆಯ ಘಟಕ ಎಂದಿನಂತೆ ಕಾರ್ಯನಿರ್ವಹಿಸಿತು ಎಂದು ಜಿಲ್ಲಾ ಸರ್ಜನ್ ಡಾ. ಸಂಗಪ್ಪ ಗಾಬಿ ‘ವಿಜಯವಾಣಿ’ಗೆ ಪ್ರತಿಕ್ರಿಯಿಸಿದರು.