ಮೀನು ಹಿಡಿಯುವಾಗ ಹೊಳೆಗೆ ಬಿದ್ದು ಸಾವು

Died
Published on

ಪಡುಬಿದ್ರಿ: ಪಿತ್ರೋಡಿಯ ವಾಸು ಎಂಬುವರಿಗೆ ಸೇರಿದ ದೋಣಿಯಲ್ಲಿ ಭರತೇಶ ಎಂಬುವರೊಂದಿಗೆ ಉದ್ಯಾವರ ಪಿತ್ರೋಡಿ ಪಾಪನಾಶಿನಿ ಹೊಳೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಉದ್ಯಾವರದ ಅನಿಲ್(46) ಬಲೆ ಬೀಸುತ್ತಿದ್ದಾಗ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ದೋಣಿಯೊಳಗೆ ಅಳವಡಿಸಿರುವ ವಾಡಿ ಮೇಲೆ ತಲೆಕೆಳಗಾಗಿ ಬಿದ್ದಿದ್ದ ಅನಿಲ್‌ನನ್ನು ಆಸ್ಪತ್ರೆಗೆ ಸಾಗಿಸಿದ್ದರೂ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ ಎಂದು ಪ್ರಕರಣ ದಾಖಲಿಸಿರುವ ಕಾಪು ಠಾಣೆ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net