

ನಂಜನಗೂಡು: ತಾಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ವ್ಯಕ್ತಿ ಮೃತಪಟ್ಟಿದ್ದಾರೆ.
ಕಸುವಿನಹಳ್ಳಿ ಗ್ರಾಮದ ಗಜೇಂದ್ರ ಕುಮಾರ್ (35) ಮೃತ. ಅಪರಿಚಿತ ವಾಹನ ಕೂಗಲೂರು ಗ್ರಾಮದ ಸಿದ್ದಯ್ಯನಹುಂಡಿ ಗ್ರಾಮದ ಗೇಟ್ ಕಡೆಯಿಂದ ಕಸುವಿನಹಳ್ಳಿ ಗ್ರಾಮದ ಕಡೆಗೆ ವೇಗವಾಗಿ ಬಂದು ಬೈಕ್‌ನಲ್ಲಿ ಹೋಗುತ್ತಿದ್ದ ಗಜೇಂದ್ರ ಕುಮಾರ್‌ಗೆ ಡಿಕ್ಕಿ ಹೊಡೆದಿದೆೆ. ಗಜೇಂದ್ರ ಕುಮಾರ್ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು. ಈ ಸಂಬಂಧ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.