ಮಲಗಿದಲ್ಲಿಯೇ ಶಿಕ್ಷಕಿ ಸಾವು

death
Published on

ಪಡುಬಿದ್ರಿ: ಕಾರ್ಕಳ ತಾಲೂಕಿನ ಬೈಲೂರಿನ ಸರ್ಕಾರಿ ಶಾಲೆ ಶಿಕ್ಷಕಿ, ಉದ್ಯಾವರ ನಿವಾಸಿ ಜೂಲಿಯಾನಾ ಹೆಲೆನ್ ರೆಬೆಲ್ಲೊ ಮನೆಯಲ್ಲಿ ಮಲಗಿದಲ್ಲಿಯೇ ಮೃತಪಟ್ಟಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿರುವ ಪುತ್ರಿಗೆ ಕರೆ ಮಾಡಿ ಜ್ವರವಿದ್ದು, ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಔಷಧ ಪಡೆದಿರುವುದಾಗಿ ತಿಳಿಸಿದ್ದರು. ಬುಧವಾರ ರಾತ್ರಿ ಮಲಗಿದ್ದು, ಬೆಳಗ್ಗೆ ಪತಿ ಎಬ್ಬಿಸಲು ಹೋದಾಗ ಚಲನೆ ಇಲ್ಲದನ್ನು ಕಂಡು ವೈದ್ಯರಲ್ಲಿ ಪರೀಕ್ಷಿಸಿದಾಗ ಮೃತಪಟ್ಟಿರುವುದು ಖಾತ್ರಿಯಾಗಿದೆ ಎಂದು ಪ್ರಕರಣ ದಾಖಲಿಸಿರುವ ಕಾಪು ಠಾಣೆ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net