ವಿವಿಧ ಪೊಲೀಸ್ ಠಾಣೆಗಳಲ್ಲಿ ಪೂರ್ವಭಾವಿ ಸಭೆ

police
Published on

ಬೆಳಗಾವಿ: ಆಗಸ್ಟ 22ರಿಂದ ಗಣೇಶೋತ್ಸವ ಆಚರಿಸುವ ಹಿನ್ನೆಲೆಯಲ್ಲಿ ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಂಗಳವಾರ ಪೂರ್ವಭಾವಿ ಸಭೆ ನಡೆದವು. ಬೆಳಗಾವಿಯ ಎಪಿಎಂಸಿ, ಮಾರ್ಕೆಟ್, ಖಡೇಬಜಾರ್, ಮಾಳಮಾರುತಿ, ಬೆಳಗಾವಿ ಗ್ರಾಮೀಣ, ಹಿರೇಬಾಗೇವಾಡಿ, ಕಾಕತಿ ಹಾಗೂ ಮಾರಿಹಾಳ ಪೊಲೀಸ್ ಠಾಣೆಗಳಲ್ಲಿ ಪೊಲೀಸ್ ಅಧಿಕಾರಿಗಳು ಗಣೇಶ ಮಂಡಳಿಗಳ ಮುಖ್ಯಸ್ಥರ ಜತೆ ಸಭೆ ನಡೆಸಿದರು.

ಸರ್ಕಾರದ ಮಾರ್ಗಸೂಚಿ ಪ್ರಕಾರ ಅತ್ಯಂತ ಸರಳವಾಗಿ ಹಬ್ಬ ಆಚರಿಸುವಂತೆ ಗಣೇಶ ಮಂಡಳಿಗಳಿಗೆ ಪೊಲೀಸ್ ಅಧಿಕಾರಿಗಳು ಸೂಚಿಸಿದರು. ರಾಜ್ಯ ಸರ್ಕಾರ ಗಣೇಶ ಮಂಡಳಿಗೆ ಗಣೇಶೋತ್ಸವ ಆಚರಿಸಲು ಷರತ್ತು ಬದ್ಧ ಅನುಮತಿ ನೀಡಿದೆ. ಸರ್ಕಾರದ ನಿಯಮ ಪಾಲಿಸಬೇಕು. ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಸಾಮಾಜಿಕ ಅಂತರ ಕಾಯ್ದುಕೊಂಡು, ಸ್ಯಾನಿಟೈಸರ್ ಮತ್ತು ಮಾಸ್ಕ್ ಬಳಸುವಂತೆ ಠಾಣಾಧಿಕಾರಿಗಳು ಸೂಚನೆ ನೀಡಿದರು.

ಕರೊನಾ ವಿರುದ್ಧ ಹೋರಾಡುತ್ತಿರುವ ಪೊಲೀಸರು ಮತ್ತೆ ಗಣೇಶೋತ್ಸವಕ್ಕೂ ಕಾರ್ಯಪ್ರವೃತ್ತರಾಗಬೇಕಾಗಿದೆ. ಹೀಗಾಗಿ ಎಲ್ಲರೂ ಸರ್ಕಾರದ ನಿಯಮ ಪಾಲಿಸಬೇಕು. ಪೊಲೀಸರಿಗೆ ಸಹಕರಿಸಬೇಕು ಎಂದು ಕೋರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net