

ನುಗ್ಗೇಹಳ್ಳಿ: ಚನ್ನರಾಯಪಟ್ಟಣ ತಾಲೂಕಿನ ಎಲ್ಲ ಗ್ರಂಥಾಲಯಗಳಲ್ಲಿ ಡಿಜಿಟಲ್ ಸೌಲಭ್ಯ ಕಲ್ಪಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.
ನುಗ್ಗೇಹಳ್ಳಿ ಹೋಬಳಿ ಕೇಂದ್ರದ ಯಂಗ್ ಸ್ಟಾರ್ ವಾಲಿಬಾಲ್ ಕ್ರೀಡಾಂಗಣದ ಆವರಣದಲ್ಲಿ ಗುರುವಾರ ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ನಮ್ಮ ರಾಜ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಬೇರೆ ರಾಜ್ಯಗಳ ಮಾದರಿ ಹೆಚ್ಚಿನ ಸೌಲಭ್ಯ ಕಲ್ಪಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಶಿಕ್ಷಕರು ಮಕ್ಕಳಿಗೆ ವ್ಯಾಕರಣ ಬದ್ಧವಾಗಿ ಕನ್ನಡವನ್ನು ಸುಲಲಿತವಾಗಿ ಓದಲು. ಬರೆಯುವುದನ್ನು ಕಲಿಸಿ ಎಂದು ತಿಳಿಸಿದರು.
ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕಿ ಪ್ರೊ. ಎನ್.ಕೆ.ಲೋಲಾಕ್ಷಿ ಮಾತನಾಡಿ, ಹೋಬಳಿ ಕೇಂದ್ರದಲ್ಲಿರುವ ಹೊಯ್ಸಳ ಶೈಲಿಯ ವಾಸ್ತುಶಿಲ್ಪ ಕಲೆಗಳ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ಹಾಗೂ ಶ್ರಿ ಸದಾಶಿವಸ್ವಾಮಿ, ದೇಗುಲಗಳು ವಿಶ್ವ ವಿಖ್ಯಾತಿ ಹೊಂದಿವೆ. ಹಕ್ಕಬುಕ್ಕರು ಹಾಗೂ ಶ್ರೇಷ್ಠ ಕಾವ್ಯ ಶಬ್ದಮಣಿ ದರ್ಪಣ ರಚಿಸಿದ ಕೇಶಿರಾಜ ನುಗ್ಗೆಹಳ್ಳಿ ಗ್ರಾಮಕ್ಕೆ ಬಂದು ಹೋದ ಚರಿತ್ರೆ ಸಂಶೋಧನೆಯಿಂದ ತಿಳಿದು ಬಂದಿದೆ ಎಂದರು.
ಸಮಾರಂಭದಲ್ಲಿ ಶ್ರೀ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ತಾಲೂಕು ಕಸಾಪ ಅಧ್ಯಕ್ಷ ಹಡೆನಹಳ್ಳಿ ಎಚ್.ಎನ್.ಲೋಕೇಶ್, ಪ್ರಾಂಶುಪಾಲ ಸ್ವಾಮಿ, ಹೋಬಳಿ ಘಟಕದ ಅಧ್ಯಕ್ಷ ಬಿ.ಆರ್.ದೊರೆಸ್ವಾಮಿ, ನಿವೃತ್ತ ಶಿಕ್ಷಣಾಧಿಕಾರಿ ಸೋಮನಾಥ್, ಬೆಳಗಳ್ಳಿ ಪುಟ್ಟಸ್ವಾಮಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಪಿ. ಸಂಪತ್ ಕುಮಾರ್, ಬೆಳಗುಲಿ ಕೆಂಪಯ್ಯ, ಅನಿಲ್, ಶೋಭಾ, ವಿಕ್ಟರ್, ನಟರಾಜ್ ಯಾದವ್, ಹೊನ್ನೇಗೌಡ ಯಾದವ್, ಶಿವಕುಮಾರ್, ಬಸವನಪುರ ಪ್ರಕಾಶ್, ಶಿವನಗೌಡ ಪಾಟೀಲ್, ಜಬಿವುಲ್ಲಾ, ಮುಳ್ಕೆರೆ ಪ್ರಕಾಶ್, ಎಂ.ಜಿ. ಬಸವರಾಜ್, ನಿರೂಪಕಿ ರೇಖಾ ಗಿರೀಶ್, ಮಂಜೇಗೌಡ ಗಂಗರಾಜ್, ಮುಖ್ಯಶಿಕ್ಷಕ ಲೋಕೇಶ್, ಬೋರೇಗೌಡ, ಮುನ್ನ ಇತರರು ಹಾಜರಿದ್ದರು.
-------
ಚಿತ್ರ..//
ನುಗ್ಗೇಹಳ್ಳಿ ಯಂಗ್ ಸ್ಟಾರ್ ವಾಲಿಬಾಲ್ ಕ್ರೀಡಾಂಗಣದ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಶಾಸಕ ಸಿ.ಎನ್.ಬಾಲಕೃಷ್ಣ ಉದ್ಘಾಟಿಸಿದರು. ಎನ್.ಕೆ.ಲೋಲಾಕ್ಷಿ, ಲೋಕೇಶ್, ದೊರೆಸ್ವಾಮಿ, ಪುಟ್ಟಸ್ವಾಮಿ, ಸಂಪತ್ ಕುಮಾರ್, ಸ್ವಾಮಿ, ರೇಖಾ ಗಿರೀಶ್, ಶೋಭಾ, ವಿಕ್ಟರ್, ಕೆಂಪಯ್ಯ ಇದ್ದರು.