ಯುವಜನತೆಯಲ್ಲಿ ಪುಸ್ತಕ ಓದುವ ಹವ್ಯಾಸ

inaug
ಮರ್ಣೆ ಗ್ರಾಪಂ ನೂತನ ಡಿಜಿಟಲ್ ಗ್ರಂಥಾಲಯವನ್ನು ಶಾಸಕ ಸುನೀಲ್ ಕುಮಾರ್ ಉದ್ಘಾಟಿಸಿದರು
Published on

ವಿಜಯವಾಣಿ ಸುದ್ದಿಜಾಲ ಹೆಬ್ರಿ

ಗ್ರಾಮೀಣ ಮಟ್ಟದಲ್ಲಿನ ಯುವಜನತೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಗ್ರಾಮೀಣ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಸಾಕಷ್ಟು ಡಿಜಿಟಲ್ ಲೈಬ್ರರಿಗಳನ್ನು ಒದಗಿಸಿದೆ ಎಂದು ಶಾಸಕ ಸುನೀಲ್ ಕುಮಾರ್ ಹೇಳಿದರು.

ಮರ್ಣೆ ಗ್ರಾಪಂ ನೂತನ ಡಿಜಿಟಲ್ ಗ್ರಂಥಾಲಯವನ್ನು ಗುರುವಾರ ಉದ್ಘಾಟಿಸಿ ಬಳಿಕ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದರು.
ರಸ್ತೆ ಅಭಿವೃದ್ಧಿ ಕುರಿತ ಮನವಿಗೆ ಸ್ಪಂದಿಸಿ, ದೆಪ್ಪುತ್ತೆ ಹಾಗೂ ಹೆರ್ಮುಂಡೆ ರಸ್ತೆ ಅಭಿವೃದ್ಧಿಗೆ ಆದ್ಯತೆ ಮೇರೆಗೆ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.

ಮರ್ಣೆ ಪಂಚಾಯಿತಿ ಅಧ್ಯಕ್ಷೆ ಪ್ರಭಾವತಿ ನಾಯಕ್, ಉಪಾಧ್ಯಕ್ಷೆ ಮೇರಿ ಮಸ್ಕರೇನ್ಹಸ್, ತಾಪಂ ಕಾರ್ಯನಿರ್ವಣಾಧಿಕಾರಿ ವಿಜಯಾ, ತಹಸೀಲ್ದಾರ್ ಪ್ರತಿಭಾ ಉಪಸ್ಥಿತರಿದ್ದರು. ಪಿಡಿಒ ತಿಲಕ್ ರಾಜ್ ಸ್ವಾಗತಿಸಿದರು. ಗುರು ಪ್ರಸಾದ್ ರಾವ್ ವಂದಿಸಿದರು. ಪಂಚಾಯಿತಿ ಸದಸ್ಯ ರಾಘವೇಂದ್ರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ಅಭಿವೃದ್ಧಿ ಕಾಮಗಾರಿಗಳ ವಿಚಾರದಲ್ಲಿ ಕಾರ್ಕಳ ತಾಲೂಕು ಮುಂಚೂಣಿಯಲ್ಲಿದೆ, ಕಾರ್ಕಳದಲ್ಲಿ ಆದಷ್ಟು ರಸ್ತೆಗಳ ಅಭಿವೃದ್ಧಿ ಉಡುಪಿ ಜಿಲ್ಲೆಯ ಯಾವುದೇ ತಾಲೂಕಿನಲ್ಲೂ ಆಗಿಲ್ಲ. ರಸ್ತೆಗಳ ಅಭಿವೃದ್ಧಿ ನಿರಂತರ ಪ್ರಕ್ರಿಯೆ. ಸರ್ಕಾರ ಕಳೆದ ಒಂದು ವರ್ಷದ ಅವಧಿಯಲ್ಲಿ ಯಾವುದೇ ಅನುದಾನ ಬಿಡುಗಡೆಗೊಳಿಸಿಲ್ಲ ಆದ್ದರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನೆಡೆಯಾಗಿದೆ.-ಸುನೀಲ್ ಕುಮಾರ್ ಶಾಸಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net