ಮೇಣದ ಬತ್ತಿ ಹಚ್ಚಿ ಪುಷ್ಪ ನಮನ ಸಲ್ಲಿಸಿದ ಗಣ್ಯರು

ಕೊಳ್ಳೇಗಾಲದ ಎಸಿ ಕಚೇರಿ ಸಭಾಂಗಣದಲ್ಲಿ ಬುದ್ಧ ಜಯಂತಿ ಆಚರಿಸಲಾಯಿತು. ಮಹೇಶ್, ಬಸವರಾಜು, ಮಂಜುಳಾ, ಸುರೇಂದ್ರ, ಕಿರಣ್, ಪಾಪಣ್ಣ, ರಾಜೇಶ್‌ಇದ್ದರು.
ಕೊಳ್ಳೇಗಾಲದ ಎಸಿ ಕಚೇರಿ ಸಭಾಂಗಣದಲ್ಲಿ ಬುದ್ಧ ಜಯಂತಿ ಆಚರಿಸಲಾಯಿತು. ಮಹೇಶ್, ಬಸವರಾಜು, ಮಂಜುಳಾ, ಸುರೇಂದ್ರ, ಕಿರಣ್, ಪಾಪಣ್ಣ, ರಾಜೇಶ್‌ಇದ್ದರು.
Published on

ಕೊಳ್ಳೇಗಾಲ: ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಭಗವಾನ್ ಬುದ್ಧ ಜಯಂತಿ ಆಚರಿಸಲಾಯಿತು.

ಈ ವೇಳೆ ಭಗವಾನ್ ಬುದ್ಧರ ಭಾವಚಿತ್ರ ಮುಂದೆ ಮೇಣದ ಬತ್ತಿ ಹಚ್ಚಿ, ಪುಷ್ಪ ನಮನ ಸಲ್ಲಿಸಲಾಯಿತು. ಬಿಆರ್‌ಸಿ ಮಹದೇವ ಕುಮಾರ್, ಬುದ್ಧನ ಜೀವನ ಚರಿತ್ರೆ ಕುರಿತು ಸುದೀರ್ಘವಾಗಿ ಮಾತನಾಡಿದರು.

ಉಪವಿಭಾಗಾಧಿಕಾರಿ ಮಹೇಶ್, ತಹಸೀಲ್ದಾರ್ ಬಸವರಾಜು, ಬಿಇಒ ಮಂಜುಳಾ, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಸುರೇಂದ್ರ, ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಉಪಾಧ್ಯಕ್ಷ ಕಿರಣ್, ಕಾರ್ಯದರ್ಶಿ ಪಾಪಣ್ಣ, ಖಜಾಂಚಿ ರಾಜೇಶ್, ಮುಖಂಡರಾದ ಬಸ್ತೀಪುರ ರವಿ, ಬಸವರಾಜು ಹಾಗೂ ಅಧಿಕಾರಿಗಳು ಇದ್ದರು.

.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net