

ಹುಬ್ಬಳ್ಳಿ: ಇಲ್ಲಿಯ ವೀರಾಪೂರ ಓಣಿಯಲ್ಲಿರುವ ಮೃತ ಅಂಜಲಿ ಅಂಬಿಗೇರ ಅವರ ಮನೆಗೆ ಶಾಸಕ ಮಹೇಶ ಟೆಂಗಿನಕಾಯಿ, ಮೂರುಸಾವಿರ ಮಠದ ಶ್ರೀ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ, ರುದ್ರಾಕ್ಷಿಮಠದ ಶ್ರೀ ಬಸವಲಿಂಗ ಸ್ವಾಮೀಜಿ ಹಾಗೂ ಬಿಜಕಲ್ ವಿರಕ್ತಮಠದ ಶ್ರೀ ಶಿವಲಿಂಗ ಸ್ವಾಮೀಜಿ ಮೊದಲು ಭೇಟಿ ನೀಡಿ, ಸಾಂತ್ವನ ಹೇಳಿದರು. ನಂತರ ಶಿರಹಟ್ಟಿಯ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಬೊಮ್ಮನಹಳ್ಳಿಯ ಶ್ರೀ ಶಿವಯೋಗೇಶ್ವರ ಸ್ವಾಮೀಜಿ, ಅಂಬಿಗೇರ ಸಮಾಜ ಪೀಠದ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಸೇರಿದಂತೆ ಬಹಳಷ್ಟು ಜನರು ಅಂಜಲಿ ಕುಟುಂಬದವರಿಗೆ ಧೈರ್ಯ ತುಂಬಿದರು.