ದೀಕ್ಷಾಭೂಮಿಗೆ ತೆರಳುವ ಬಸ್‌ಗೆ ಶಾಸಕರಿಂದ ಚಾಲನೆ

ಫೋಟೋ ಶೀರ್ಷಿಕೆ 25 ಸಿಆರ್_ಪಿ-2ಎ
ಚನ್ನರಾಯಪಟ್ಟಣದಿಂದ ಮಹಾರಾಷ್ಟ್ರದ ನಾಗಪುರದಲ್ಲಿನ ಡಾ.ಅಂಬೇಡ್ಕರ್ ಅವರ ದೀಕ್ಷಾ ಭೂಮಿಗೆ ಯಾತ್ರೆ ಕೈಗೊಂಡ ಬಸ್‌ಗೆ ಶಾಸಕ ಸಿ.ಎನ್.ಬಾಲಕೃಷ್ಣ ಚಾಲನೆ ನೀಡಿದರು.
Published on

ಚನ್ನರಾಯಪಟ್ಟಣ: ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ, ಆದರ್ಶಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಶಕ್ತಿ ತುಂಬುವ ಕೆಲಸಕ್ಕೆ ಮುಂದಾಗಬೇಕೆಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

ಪಟ್ಟಣದ ಮಿನಿ ವಿಧಾನಸೌಧ ಆವರಣದ ಮುಂಭಾಗದಲ್ಲಿ ಇತ್ತೀಚೆಗೆ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಹಾರಾಷ್ಟ್ರದ ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಚನ್ನರಾಯಪಟ್ಟಣ ಮತ್ತು ಅರಸೀಕೆರೆಯಿಂದ ಸುಮಾರು 45 ಅನುಯಾಯಿಗಳನ್ನು ರಾಜ್ಯ ಸರ್ಕಾರದ ವತಿಯಿಂದ ಕಳುಹಿಸಿಕೊಡಲಾಗುತ್ತಿದೆ ಎಂದರು.

ಅಂಬೇಡ್ಕರ್ ಅವರು ಬೌದ್ಧ ಧರ್ಮದ ದೀಕ್ಷೆ ಪಡೆದ ಪವಿತ್ರ ಕ್ಷೇತ್ರಕ್ಕೆ ತಾಲೂಕಿನಿಂದ ಯಾತ್ರಾರ್ಥಿಗಳು ಭೇಟಿ ನೀಡುತ್ತಿದ್ದಾರೆ. ಬೇರೆ ಬೇರೆ ಧರ್ಮದವರು ವಿವಿಧ ಕ್ಷೇತ್ರಗಳಿಗೆ ಯಾತ್ರೆ ಮಾಡುವ ಮಾದರಿಯಲ್ಲಿಯೇ ಅಂಬೇಡ್ಕರ್ ಅನುಯಾಯಿಗಳು ಪ್ರತಿ ವರ್ಷ ಅಕ್ಟೋಬರ್‌ನಲ್ಲಿ ನಾಗಪುರದಲ್ಲಿ ನಡೆಯುವ ಸಮಾವೇಶಕ್ಕೆ ದೀಕ್ಷಾ ಯಾತ್ರೆ ಕೈಗೊಳ್ಳುವುದು ವಾಡಿಕೆ. ಸಮಾಜ ಕಲ್ಯಾಣ ಇಲಾಖೆಯಿಂದ ಅಂಬೇಡ್ಕರ್ ಅನುಯಾಯಿಗಳನ್ನು ಪ್ರತಿ ವರ್ಷವೂ ದೀಕ್ಷಾಯಾತ್ರೆಗೆ ಕಳುಹಿಸಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಎಲ್.ಶಂಕರ್‌ಮೂರ್ತಿ, ದಲಿತ ಮುಖಂಡರಾದ ನಾಗೇಶ್, ಲಕ್ಷ್ಮಣ್ ಸೇರಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net