

ಲಕ್ಷೆ್ಮೕಶ್ವರ: ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆ, ಸಮಯ ಪಾಲನೆ, ಶಿಸ್ತು ರೂಢಿಸಿಕೊಂಡು ಸ್ಪಷ್ಟ ಗುರಿಯೆಡೆಗೆ ಸಾಗಿದರೆ ಉನ್ನತ ಸ್ಥಾನಕ್ಕೇರಬಹುದು ಎಂದು ಗದಗ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎ. ಬಳಿಗೇರ ಹೇಳಿದರು.
ಪಟ್ಟಣದ ಬಿಸಿಎನ್ ವಿದ್ಯಾಸಂಸ್ಥೆಯ ಬಿಸಿಎನ್ ವಿಜನ್ ಪಪೂ ಕಾಲೇಜ್ನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಉತ್ತಮ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡರೆ ಸಾಧನೆ ಮಾಡಬಹುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ನಿರ್ದೇಶಕ ಲೋಹಿತ್ ನೆಲವಿಗಿ ಮಾತನಾಡಿ, ನಿಮ್ಮಲ್ಲಿರುವ ಸಾಮಥ್ಯವನ್ನು ವ್ಯರ್ಥ ಮಾಡಿಕೊಳ್ಳದೆ ಅದನ್ನು ಉಪಯೋಗಿಸಿ ಸಾಧನೆ ಮಾಡುವ ವಿಶ್ವಾಸ ಹೊಂದಿ ಮುಂದೆ ಸಾಗಬೇಕು ಎಂದರು. ಪ್ರಾಚಾರ್ಯ ಮಂಜುನಾಥ ಬಂಡಿವಾಡ, ಡಿ.ಎಂ.ಪೂಜಾರ, ಉಪನ್ಯಾಸಕರಾದ ಗಿರೀಶ ರಡ್ಡಿ, ಬಸವರಾಜ ಶೆಟ್ಟರ್ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರು.