ಶಿಕ್ಷಣ ಕ್ಷೇತ್ರಕ್ಕೆ ದಿನಕರ ದೇಸಾಯಿ ಕೊಡುಗೆ ಅಪಾರ

Certificate given to Students
Published on

ಭಟ್ಕಳ: ದಿನಕರ ದೇಸಾಯಿಯವರು ಸಾಹಿತ್ಯ, ಸಾಮಾಜಿಕ, ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳಿಂದಾಗಿಯೇ ಇಂದಿಗೂ ಸ್ಮರಿಸಿಕೊಳ್ಳಲಾಗುತ್ತಿದೆ. ಅಂಥವರು ಸ್ಥಾಪಿಸಿದ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಅವರ ಜೀವನದ ಆದರ್ಶಗಳಿಂದ ಪ್ರೇರಿತರಾಗಿ ಉತ್ತಮ ಸಾಧನೆ ಮಾಡುವಂತಾಗಬೇಕು ಉಪನ್ಯಾಸಕ ಸಂತೋಷ ಆಚಾರ್ಯ ಹೇಳಿದರು.

ಜನತಾ ವಿದ್ಯಾಲಯ ಮುರ್ಡೆಶ್ವರ ಹಾಗೂ ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಚುಟುಕು ಬ್ರಹ್ಮ ದಿನಕರ ದೇಸಾಯಿ ಸಂಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿದರು.

ಸಾಹಿತಿ ಮಾನಾಸುತ ಶಂಭು ಹೆಗಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಚುಟುಕುಗಳ ಮೂಲಕ ಚುಟುಕು ಬ್ರಹ್ಮ ದಿನಕರ ದೇಸಾಯಿಯವರಿಗೆ ನುಡಿನಮನ ಸಲ್ಲಿಸಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರೂ, ಕಸಾ ಪ ಆಜೀವ ಸದಸ್ಯರಾದ ಎಸ್.ಎಸ್.ಕಾಮತ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಿಗೆ ದಿನಕರರ ಬದುಕು -ಬರೆಹ ದ ಕುರಿತು ಭಾಷಣ ಸ್ಪರ್ಧೆ, ದಿನಕರರು ರಚಿಸಿದ ಗೀತೆಗಳ ಗಾಯನ ಮತ್ತು ಚುಟುಕು ವಾಚನ ಸ್ಪರ್ಧೆ ನಡೆಸಿ ಸಾಹಿತ್ಯ ಪರಿಷತ್ತಿನ ವತಿಯಿಂದ ಬಹುಮಾನ ವಿತರಿಸಲಾಯಿತು. ಮುಖ್ಯಾಧ್ಯಾಪಕಿ ಉಷಾ ಭಟ್ ಎಲ್ಲರನ್ನು ಸ್ವಾಗತಿಸಿದರು. ಹಿರಿಯ ಶಿಕ್ಷಕಿ ಆಶಾ ಕಲ್ಮನೆ ವಂದಿಸಿದರು. ಶಿಕ್ಷಕರಾದ ಮಹೇಶ ಹಣಬರಟ್ಟಿ ದಿನಕರರ ಕುರಿತು ಮಾತನಾಡಿದರು. ಶಿಕ್ಷಕ ಮಹೇಶ ನಾಯ್ಕ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net