ದೀನದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

IMG_20240925_205728_516-1.jpg
Published on

ಹುಬ್ಬಳ್ಳಿ: ಪಂಡಿತ್ ದೀನದಯಾಳ್ ಉಪಾಧ್ಯಾಯರ 108ನೇ ಜನ್ಮದಿನದ ಅಂಗವಾಗಿ ಇಲ್ಲಿಯ ಅರವಿಂದ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರು ದೇಶಪ್ರೇಮಿ, ಬಲಪಂಥೀಯ ಚಿಂತಕರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಯಕರಾಗಿದ್ದರು. ಸಮಾಜ ಸೇವೆ ರಾಷ್ಟ್ರ ಸೇವೆಗೆ ಸಮರ್ಪಿತರಾಗಿದ್ದ ಅವರು ದೇಶಕ್ಕೆ ನೀಡಿದ ಸೇವೆ ಅನನ್ಯ ಎಂದರು.

ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ, ವಕ್ತಾರ ರವಿ ನಾಯ್ಕ, ಪೂರ್ವ ಕ್ಷೇತ್ರದ ಅಧ್ಯಕ್ಷ ಪ್ರಭು ನವಲಗುಂದಮಠ, ಪ್ರಮುಖರಾದ ಪ್ರವಿಣ ಪವಾರ, ವಿನಾಯಕ ಕುಲಕರ್ಣಿ, ಗುರು ಮೈಲಿ, ಆನಂದ ಮದರಿ, ಮುರಗೇಶ ಹೊರಡಿ ಹಾಗೂ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net