

ಮಂಗಳೂರು: ಸುಳ್ಳನ್ನು ಸತ್ಯ ಮಾಡಲು ಯಾವ ರೀತಿ ಪ್ರಚೋದನೆ ಮಾಡಬೇಕು, ಗಲಾಟೆ ಎಬ್ಬಿಸಬೇಕು, ದಂಗೆ ಮಾಡಬೇಕೆಂಬ ಬಗ್ಗೆ ಆರ್.ಎಸ್.ಎಸ್ ಸಾರ್ವಜನಿಕ ರಿಗೆ ತರಬೇತಿ ನೀಡುತ್ತಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು ರಾಜ್ಯಪಾಲರು ಸರ್ಕಾರದ ಸಾಂವಿಧಾನಿಕ ಮುಖ್ಯಸ್ಥರು
ಮುಖ್ಯಸ್ಥ ಸರ್ಕಾರದ ವಿರುದ್ಧವೇ ಷಡ್ಯಂತ್ರದಲ್ಲಿ ಭಾಗಿಯಾದ್ರೆ ಏನೆಂದು ಕರೆಯೋದು?
ಒಈಇದು ರಾಜ್ಯಕ್ಕೆ ಮಾಡಿದ ದ್ರೋಹ ಅಲ್ವಾ..?
ಎಂದರು.
ಸಿ.ಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಆರೋಪ ವಿಚಾರ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು,
ಪ್ರಾಸಿಕ್ಯೂಶನ್, ಕೋರ್ಟ್ ಅದೆಲ್ಲಾ ಜಡ್ಜ್ ತೀರ್ಮಾನ ಮಾಡುತ್ತಾರೆ. ಆದರೆ ರಾಜ್ಯಪಾಲರ ನಡೆ ಬಗ್ಗೆ ಇಡೀ ರಾಜ್ಯಕ್ಕೆ ಗೊತ್ತಾಗಿದೆ
ಯಾವ ರೀತಿ ಪಕ್ಷಪಾತ ಮಾಡಿದ್ದಾರೆಂದು ಗೊತ್ತಾಗಿದೆ ಎಂದು ಆಪಾದಿಸಿದರು.