

ಹುಬ್ಬಳ್ಳಿ: ಕರ್ನಾಟಕ ಅಮೆಚೂರು ಸೈಕ್ಲಿಂಗ್ ಅಸೋಸಿಯೇಷನ್ನ ಸಹ ಕಾರ್ಯದರ್ಶಿಯಾಗಿ ಹುಬ್ಬಳ್ಳಿಯ ಕಾರಟಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆಡಳಿತಾಧಿಕಾರಿ ದಿನೇಶ ಜೈನ್ ನೇಮಕಗೊಂಡಿದ್ದಾರೆ.
ಬೆಂಗಳೂರಿನಲ್ಲಿರುವ ರಾಜ್ಯ ಸೈಕ್ಲಿಂಗ್ ಸಂಸ್ಥೆಯ ಕಾರ್ಯಕಾರಿ ಸಮಿತಿ ಸಭೆಯಲ್ಲಾದ ನಿರ್ಣಯದಂತೆ ಈ ನೇಮಕ ಮಾಡಲಾಗಿದೆ ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಶ್ರೀಶೈಲ ಕುರಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.