

ಗುಂಡ್ಲುಪೇಟೆ: ಪಟ್ಟಣದ ಮಹಾಲಕ್ಷ್ಮೀ ಬಡಾವಣೆಯ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ನ.16ರಂದು ಸಂಜೆ 6ಕ್ಕೆ ದೀಪೋತ್ಸವ ಆಯೋಜಿಸಲಾಗಿದೆ.
ಪಟ್ಟಣದಲ್ಲಿ ಮಠ ಪ್ರತಿಷ್ಠಾಪನೆಗೊಂಡು ಇಂದಿಗೆ 6 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಶೇಷವಾಗಿ ಪೂಜಾ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗಿದೆ.
ಈ ಅಂಗವಾಗಿ ಬೆಳಗ್ಗೆ 6ಕ್ಕೆ ರಾಯರ ಬೃಂದಾವನಕ್ಕೆ ಪಂಚಾಮೃತ ಅಭಿಷೇಕ, 9.30ಕ್ಕೆ ರಥೋತ್ಸವ, 10.30ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 12ಕ್ಕೆ ಮೈಸೂರಿನ ಹೆಸರಾಂತ ಸವಿಗಾನ ದಾಸವಾಣಿ ಮಹಿಳಾ ಬಳಗದವರಿಂದ ದೇವರನಾಮ ಹಾಗೂ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಟ್ರಸ್ಟ್‌ನ ಅಧ್ಯಕ್ಷೆ ರಾಜೇಶ್ವರಿ ಚಂದ್ರಶೇಖರ್ ಮನವಿ ಮಾಡಿದ್ದಾರೆ.