

ಮಂಡ್ಯ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ಟೀಮ್ ಲೀಸ್, ಮೆಡ್ ಪ್ಲಸ್, ದೀನಬಂಧು ಸ್ಕಿಲ್ ಡೆವಲಪ್‌ಮೆಂಟ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಡಿ.13ರಂದು ನೇರ ಸಂದರ್ಶನ ಆಯೋಜಿಸಲಾಇದೆ.
ಆರ್‌ಇ, ಬಿಆರ್‌ಇ, ಟೆಲಿಸೇಲ್ಸ್, ರೀಟೆಲ್ ಸೇಲ್ಸ್, ಸಿಎಸ್‌ಎ ಟ್ರೈನರ್ ಹುದ್ದೆಗೆ ಎಸ್‌ಎಸ್‌ಎಲ್ಸಿ, ಪಿಯುಸಿ, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಉತ್ತೀರ್ಣರಾದ 18 ರಿಂದ 32 ವರ್ಷದೊಳಗಿನ ಅಭ್ಯರ್ಥಿಗಳು ಅಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆಯೋಜಿಸಿರುವ ಸಂದರ್ಶನದಲ್ಲಿ ಭಾಗವಹಿಸಬಹುದು. ಮಾಹಿತಿಗೆ ದೂ.ಸಂ: 08232-295124 ಮತ್ತು 9164642684 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.