

ಮಂಡ್ಯ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಮೆ.ಕ್ರೆಡಿಟ್ ಆಕ್ಸಿಸ್ ಗ್ರಾಮೀಣ ಲಿಮಿಟೆಡ್ ಕಂಪನಿಯ ಸಹಯೋಗದಲ್ಲಿ ಟ್ರೈನಿ ಕೇಂದ್ರ ಮ್ಯಾನೇಜರ್ ಹುದ್ದೆ ನೇಮಕಾತಿಗೆ ಜೂ.14ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ(ಯಾವುದೇ ಟ್ರೇಡ್) ಹಾಗೂ ಯಾವುದೇ ಪದವಿ ಉತ್ತೀರ್ಣರಾದ 18 ರಿಂದ 28 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಮತ್ತು 18 ರಿಂದ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅಂದು ಬೆಳಗ್ಗೆ 10ಗಂಟೆಗೆ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಸ್ವವಿವರದೊಂದಿಗೆ ಹಾಜರಾಗಬಹುದು. ಮಾಹಿತಿಗೆ ದೂ.ಸಂ 08232-295124 ಅಥವಾ ಮೊ.ಸಂ 9164642684 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.