

ಮಂಡ್ಯ: ಪಾಂಡವಪುರ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ, ಎಚ್‌ಡಿಎಫ್‌ಸಿ ಲೈಫ್ ಇನ್ಸೂರೆನ್ಸ್, ರಾಜ್ ಬಯೋ ಆರ್ಗಾನಿಕ್ಸ್ ಮತ್ತು ಬಿ.ಜೆಟ್ ಫೈನಾನ್ಸ್ ಸಂಸ್ಥೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆ ನೇಮಕಾತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ಫೆ.1ರಂದು ನೇರ ಸಂದರ್ಶನ ಆಯೋಜಿಸಲಾಗಿದೆ.
ಯಾವುದೇ ಪದವಿ, ಸ್ನಾತಕೋತ್ತರ ಪದವಿ ಮತ್ತು ಬಿ.ಇ ಅಥವಾ ಡಿಪ್ಲೊಮೋ(ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್) ಉತ್ತೀರ್ಣರಾದ 18 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ವ್ಯಾಸಂಗಕ್ಕೆ ಸಂಬಂಧಿಸಿದ ದಾಖಲೆಯೊಂದಿಗೆ ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಿರುವ ಸಂದರ್ಶನದಲ್ಲಿ ಭಾಗವಹಿಸಬಹುದು. ಮಾಹಿತಿಗೆ ದೂ.ಸಂ 08232-295124 ಅಥವಾ ಮೊ.ಸಂ 9164642684 ಮತ್ತು 8970646629 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.