ಸೆ.30ರಂದು ಉದ್ಯೋಗಕ್ಕೆ ನೇರ ಸಂದರ್ಶನ: ಪಿ.ಯು.ಸಿ, ಐ.ಟಿ.ಐ, ಡಿಪ್ಲಮೋ, ಪದವೀಧರರಿಗೆ ಅವಕಾಶ

job
Published on

ಮಂಡ್ಯ: ಸೂರ್ಯೋದಯ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನ ಸಹಯೋಗದಲ್ಲಿ ಸೆ.30ರಂದು ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗಕ್ಕೆ ನೇರ ಸಂದರ್ಶನ ಆಯೋಜಿಸಲಾಗಿದೆ.

ಪಿ.ಯು.ಸಿ, ಐ.ಟಿ.ಐ(ಯಾವುದೇ ಟ್ರೇಡ್), ಡಿಪ್ಲಮೋ ಹಾಗೂ ಯಾವುದೇ ಪದವಿ ಉತ್ತೀರ್ಣರಾದ 21 ರಿಂದ 30 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅಂದು ಸ್ವವಿವರೊಂದಿಗೆ ಅಂದು ಸಂದರ್ಶನಕ್ಕೆ ಹಾಜರಾಗಬಹುದು. ಮಾಹಿತಿಗೆ ದೂ.ಸಂ 08232-295124 ಅಥವಾ ಮೊ.ಸಂ 8660061488 ಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net