ಕುಕ್ಕೆದೇವಸ್ಥಾನಕ್ಕೆ ನಿರ್ದೇಶಕ ಅಟ್ಲೀ 10 ಲಕ್ಷ ರೂ. ದೇಣಿಗೆ

atlee webbb
Published on

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳು ಚಿತ್ರರಂಗದ ನಿರ್ಮಾಪಕ, ನಿರ್ದೇಶಕ ಅರುಣ್ ಕುಮಾರ್(ಅಟ್ಲೀ) ದಂಪತಿ ಶುಕ್ರವಾರ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ಅವರು ದೇವಳದ ಅನ್ನದಾನ ನಿಧಿಗೆ 10 ಲಕ್ಷ ರೂ. ದೇಣಿಗೆ ನೀಡಿದರು. ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಅವರಿಗೆ ದೇಣಿಗೆಯ ಚೆಕ್ ಅನ್ನು ಹಸ್ತಾಂತರಿಸಿದರು. ದೇವಳದ ಕಚೇರಿ ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್, ಸುಬ್ರಹ್ಮಣ್ಯ ಗ್ರಾಪಂ ಸದಸ್ಯ ಹರೀಶ್ ಇಂಜಾಡಿ, ಮಾಜಿ ಸದಸ್ಯ ಸುರೇಶ್ ಭಟ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net