ನೀರಿನ ಸಮಸ್ಯೆ ನಿರ್ವಹಣೆಗೆ ಸಿದ್ದರಾಗಿರಬೇಕು

ವಿಪತ್ತು ನಿರ್ವಹಣಾ ಪ್ರಾಧಿಕಾರ ಮೇಲ್ವಿಚಾರಣಾ ಸಭೆ
ವಿಪತ್ತು ನಿರ್ವಹಣಾ ಪ್ರಾಧಿಕಾರ ಮೇಲ್ವಿಚಾರಣಾ ಸಭೆ
Published on

ಬೆಂಗಳೂರು ಗ್ರಾಮಾಂತರ: ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಪರ್ಯಾಯವಾಗಿ ನೀರು ಪೂರೈಸಲು ಕೊಳವೆ ಬಾವಿಗಳನ್ನು ಗುರುತಿಸುವುದು, ಅವಶ್ಯವಿದ್ದಲ್ಲಿ ಖಾಸಗಿ ಕೊಳವೆ ಬಾವಿಗಳ ಮೂಲಕ ಹಾಗೂ ಟ್ಯಾಂಕರ್‌ಗಳ ಮೂಲಕ ನೀರನ್ನು ಪೂರೈಸಲು ಅಧಿಕಾರಿಗಳು ಪೂರ್ವ ಸಿದ್ದತೆ ಮಾಡಿಕೊಳ್ಳಬೇಕು ಎಂದು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೂಚಿಸಿದರು.
ದೇವನಹಳ್ಳಿಯ ಡಿಸಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮೇಲ್ವಿಚಾರಣಾ ಸಭೆಯಲ್ಲಿ ಮಾತನಾಡಿದರು. ಜಾನುವಾರಗಳ ಮೇವಿನ ಕಿಟ್‌ಗಳ ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ಕ್ರಮವಹಿಸುವಂತೆ ಪಶು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗೋಶಾಲೆ ಹಾಗೂ ಮೇವಿನ ಬ್ಯಾಂಕ್ ನಿರ್ವಹಣೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬರ ಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವ ಸಂಬಂಧ ಅಧಿಕಾರಿಗಳು ಪರಿಶೀಲನೆ ನಡೆಸಿ ಅಗತ್ಯಕ್ರಮಕ್ಕೆ ತುರ್ತಾಗಿ ಸ್ಪಂದಿಸಬೇಕು ಎಂದು ಸೂಚನೆ ನೀಡಿದರು.
--

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net