ಬಡ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ : ಡಾ.ಹರಿಕೃಷ್ಣ ಪುನರೂರು ಆಶಯ

New Project (24)
Published on

ಮೂಲ್ಕಿ: ಉದ್ಯಮದಲ್ಲಿ ಪ್ರಾಮಾಣಿಕ ಸೇವೆಯೊಂದಿಗೆ ಲಾಭದ ಕೆಲವು ಅಂಶವನ್ನು ಗ್ರಾಮೀಣ ಬಡವರ್ಗದ ಮಕ್ಕಳ ಶಿಕ್ಷಣಕ್ಕಾಗಿ ದಾನ ನೀಡುವ ಕಾರ್ಯ ಅಭಿನಂದನೀಯ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಹೇಳಿದರು. ಮೂಲ್ಕಿ ಸುರಭಿ ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಸಂಸ್ಥೆಯ ವತಿಯಿಂದ 3ನೇ ವರ್ಷ ಮೂಲ್ಕಿ ಹಾಗೂ ಹೆಜಮಾಡಿ ಆಸುಪಾಸಿನ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶನಿವಾರ ಶಾಲಾ ಶುಲ್ಕ ಹಾಗೂ ಸಮವಸ್ತ್ರ ಹೊಲಿಸಲು ಆರ್ಥಿಕ ನೆರವು ವಿತರಣೆ ಸಮಾರಂಭದಲ್ಲಿ ಮಾತನಾಡಿದರು. ಮೂಲ್ಕಿ ಕೊಸೆಸಾಂವ್ ಅಮ್ಮನವರ ಚರ್ಚ್ ಧರ್ಮಗುರು ಫಾ.ಅಂತೊನಿ ಶೆರಾ ಕಾರ್ಯಕ್ರಮ ಉದ್ಘಾಟಿಸಿದರು. ಸುರಭಿ ಇಲೆಕ್ಟ್ರಾನಿಕ್ಸ್ ಫರ್ನಿಚರ್ ಮಾಲೀಕ ಜೋನ್ ಕ್ವಾಡ್ರಸ್ ಅಧ್ಯಕ್ಷತೆ ವಹಿಸಿದ್ದರು. ಮೂಲ್ಕಿ ಪೊಲೀಸ್ ನಿರೀಕ್ಷಕ ಮಂಜುನಾಥ್ ಬಿ.ಎಸ್., ವಾದಿರಾಜ ಉಪಾಧ್ಯಾಯ ಕೊಲಕಾಡಿ, ವಕೀಲ ಹಂಝತ್ ಹೆಜಮಾಡಿ ಕೋಡಿ, ಕಾರ್ನಾಡು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫ್ರೌಢಶಾಲೆ ಮುಖ್ಯಶಿಕ್ಷಕಿ ಜಯಲಕ್ಷ್ಮೀ ಟಿ.ನಾಯಕ್ ಮಾತನಾಡಿದರು. ರೋಶನ್ ಫುಟಾಡೋ ಕಾರ್ಯಕ್ರಮ ನಿರೂಪಿಸಿದರು, ಸುಧಾಕರ್ ಹೆಜಮಾಡಿ ವಂದಿಸಿದರು.

ಶಿಕ್ಷಣಕ್ಕೆ ಸಹಕಾರ ದೇವರ ಪೂಜೆಗೆ ಸಮಾನವಾಗಿದ್ದು, ವಿದ್ಯಾರ್ಥಿಗಳು ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣದಿಂದ ದೂರವಿದ್ದು ಸಾಧಕರಾಗಿ ಬೆಳೆಯಬೇಕು. ಫಾ.ಅಂತೊನಿ ಶೆರಾ ಧರ್ಮಗುರು, ಕೊಸೆಸಾಂವ್ ಅಮ್ಮನವರ ಚರ್ಚ್ ಮೂಲ್ಕಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net