ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯ ವಿತರಣೆ

FotoJet (1)
Published on

ಹುಳಿಯಾರು : ನಮ್ಮ ಬ್ಯಾಂಕು ಸ್ವಸಹಾಯ ಸಂಘಗಳು, ಕೈಗಾರಿಕೆ, ಸೋಲಾರ್​ ವಿದ್ಯುತ್​ ಉತ್ಪಾದನೆಗೆ, ಉನ್ನತ ವ್ಯಾಸಂಗಕ್ಕೆ, ಕೃಷಿ, ಕೃಷಿಗೆ ಪೂರಕವಾದ ಹೈನುಗಾರಿಕೆ, ಕುರಿ, ಕೋಳಿ, ಮೊಲ ಸಾಕಾಣಿಕೆ ಮುಂತಾದ ಉದ್ಯೋಗಾಧಾರಿತ ಸಾಲ ಸೌಲಭ್ಯಗಳನ್ನು ನೀಡುವುದರಲ್ಲಿ ಮುಂಚೂಣಿಯಲ್ಲಿದೆ ಎಂದು ಎಸ್​ಬಿಐ ಮ್ಯಾನೇಜರ್​ ಸುರೇಶ್​ ತಿಳಿಸಿದರು.

ತಾಲೂಕಿನ ದೊಡ್ಡಬಿದರೆ ಗ್ರಾಪಂ ಕಲ್ಲಹಳ್ಳಿಯಲ್ಲಿ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಹಾಗೂ ಆರ್ಥಿಕ ಸಾಕ್ಷರತಾ ಕೇಂದ್ರ ಚಿಕ್ಕನಾಯಕನಹಳ್ಳಿ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜನ ಸುರಕ್ಷಾ ಶಿಬಿರದಲ್ಲಿ ಮಾತನಾಡಿದರು.

ಚಿಕ್ಕನಾಯಕನಹಳ್ಳಿ ಆರ್ಥಿಕ ಸಾಕ್ಷರತಾ ಸಲಹೆಗಾರ ಆರ್​.ಎಂ.ಕುಮಾರಸ್ವಾಮಿ ಮಾತನಾಡಿ, ದೇಶದ ಮೂಲೆ ಮೂಲೆಗಳ ಹಳ್ಳಿಗಳಿಗೂ ಪ್ರಧಾನಮಂತ್ರಿಯವರ ಜನ ಸುರಕ್ಷಾ ಹಾಗೂ ಜೀವನ ಜ್ಯೋತಿ ವಿಮಾ ಯೋಜನೆಗಳು ತಲುಪಬೇಕೆಂಬುದೇ ಜನ ಸುರಕ್ಷಾ ಶಿಬಿರದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ದೊಡ್ಡಬಿದರೆ ಗ್ರಾಪಂ ಸಂಜೀವಿನಿ ಒಕ್ಕೂಟದ ಎಂಬಿಕೆ ಲಕ್ಷಿ$್ಮ ಮಾತನಾಡಿ, ಕೇಂದ್ರ ಸರ್ಕಾರ ಹಾಗೂ ಬ್ಯಾಂಕುಗಳ ಮುಖಾಂತರ ಲಭ್ಯವಿರುವ ಎಲ್ಲ ಸೌಲಭ್ಯಗಳನ್ನು ಪಡೆಯಬೇಕೆಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net