

ಚಿತ್ರದುರ್ಗ: ಜಿಲ್ಲಾ ಕೇಂದ್ರದಲ್ಲಿ ಆ.15ರಂದು ಭಾರತದ ಸ್ವಾತಂತ್ರೊೃೀತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಡಿಸಿ ಕಚೇರಿಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸ್ವಾತಂತ್ರ್ಯದಿನಾಚರಣೆ ನಮ್ಮ ರಾಷ್ಟ್ರೀಯ ಹಬ್ಬ. ಸಾರ್ವಜನಿಕರು, ಎಲ್ಲ ಅಧಿಕಾರಿಗಳು ತಪ್ಪದೇ ಭಾಗವಹಿಸಬೇಕು. ಅಂದು ಬೆಳಗ್ಗೆ 8ಕ್ಕೆ ಡಿಸಿ ಕಚೇರಿ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಲಿದೆ. 9ಕ್ಕೆ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಜಿಲ್ಲಾ ಮಟ್ಟದ ಸ್ವಾತಂತ್ರೃ ದಿನಾಚರಣೆ ಸಮಾರಂಭ ನಡೆಯಲಿದೆ. ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಕಚೇರಿಗಳಲ್ಲಿ ಧ್ವಜಾರೋಹಣ ನಡೆಸಬೇಕು ಎಂದು ಸೂಚಿಸಿದರು.
ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಶಿಷ್ಟಾಚಾರದಂತೆ ಎಲ್ಲ ಗಣ್ಯರು, ಜನಪ್ರತಿನಿಧಿಗಳನ್ನು ಸಮಾರಂಭಕ್ಕೆ ಆಹ್ವಾನಿಸಬೇಕು. ತಹಸೀಲ್ದಾರ್‌ಗಳು ಶಾಸಕರು, ಜನಪ್ರತಿನಿಧಿಗಳಿಗೆ ಆಹ್ವಾನ ಪತ್ರಿಕೆಗಳನ್ನು ತಲುಪಿಸಬೇಕು. ವೇದಿಕೆ, ಅಲಂಕಾರ ಸಮರ್ಪಕವಾಗಿರಬೇಕು.
ಪರೇಡ್‌ನಲ್ಲಿ ಪೊಲೀಸ್,ಅಗ್ನಿಶಾಮಕ, ಗೃಹರಕ್ಷಕದಳ, ಸೇವಾದಳ, ಎನ್‌ಸಿಸಿ ಸೇರಿ 25 ಕ್ಕೂ ಹೆಚ್ಚು ತಂಡಗಳು ಭಾಗವಹಿಸಲಿವೆ. ಖಾಸಗಿ ಹಾಗೂ ಸರ್ಕಾರಿ ಶಾಲೆಗಳ ಮಕ್ಕಳು ಕೂಡ ಪರೇಡ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಅರ್ಥಪೂರ್ಣವಾಗಿರಬೇಕು ಎಂದು ತಿಳಿಸಿದರು.
ಜಿಲ್ಲಾ ಮಟ್ಟದ ಸಮಾರಂಭದ ಸ್ಥಳದಲ್ಲಿ ಹಾಜರಾತಿ ಪಡೆಯಲಾಗುವುದು. ಗೈರು ಹಾಜರಾಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ,ನಗರದ ಪ್ರಮುಖ ವೃತ್ತಗಳು, ಸರ್ಕಾರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು. ತರಾಸು ರಂಗಮಂದಿರದ ನವೀಕರಣ ಹಿನ್ನೆಲೆಯಲ್ಲಿ ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಗರದ ಕಲ್ಯಾಣ ಮಂಟಪವೊಂದರಲ್ಲಿ ಆಯೋಜಿಸಲು ಕ್ರಮ ವಹಿಸುವಂತೆ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಅವರಿಗೆ ಸೂಚಿಸಿದರು.
ಎಸ್‌ಪಿ ರಂಜಿತ್‌ಕುಮಾರ್ ಬಂಡಾರು, ಆಹಾರ ಇಲಾಖೆ ಉಪನಿರ್ದೇಶಕ ಸಿದ್ದರಾಮ ಮಾರಿಹಾಳ್, ಡಿಡಿಪಿಐ ಮಂಜುನಾಥ, ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕ ಬಿ.ಆನಂದ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ. ಕಾಳಿಸಿಂಗೆ ಮತ್ತಿತರರು ಇದ್ದರು.