ಮಳೆ ಹಾನಿಯ ತಪ್ಪು ವರದಿ ದಾಖಲಿಸಿದರೆ ಶಿಸ್ತು ಕ್ರಮ

14 Dwd 7
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯಾದ್ಯಂತ ಅ. 1ರಿಂದ 14ರವರೆಗೆ ಅತಿ ಹೆಚ್ಚು ಮಳೆಯಾಗಿದೆ. 25,525 ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ. ಮನೆ ಮತ್ತು ಬೆಳೆ ಹಾನಿಯ ತಪ್ಪು ಮಾಹಿತಿ ದಾಖಲಿಸುವ ಅಽಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಽಕಾರದ ಅಧ್ಯಕ್ಷೆ ಹಾಗೂ ಜಿಲ್ಲಾಽಕಾರಿ ದಿವ್ಯ ಪ್ರಭು ಹೇಳಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಽಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಾನಿಯ ಜಂಟಿ ಸಮೀಕ್ಷೆ ಹಾಗೂ ವರದಿ ದಾಖಲಿಸುವಲ್ಲಿ ಯಾವುದೇ ಒತ್ತಡಗಳಿಗೆ ಒಳಗಾಗಬಾರದು.
1,950 ಹೆಕ್ಟೇರ್ ಶೇಂಗಾ, 10,600 ಹೆಕ್ಟೇರ್ ಗೋವಿನಜೋಳ ಹಾಗೂ 12,400 ಹೆಕ್ಟೇರ್ ಹತ್ತಿ ಸೇರಿ ಒಟ್ಟು 24,950 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. ಅದೇರೀತಿ 575 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಈ ಕುರಿತು ಪ್ರಾಥಮಿಕ ವರದಿ ಸಲ್ಲಿಕೆ ಆಗಿದ್ದು, ಜಂಟಿ ಸಮೀಕ್ಷೆ ಕೈಗೊಂಡ ನಂತರ ಪರಿಹಾರ ನೀಡಲು ಕ್ರಮ ವಹಿಸಬೇಕು ಎಂದರು.
ಜಿಲ್ಲೆಯಾದ್ಯAತ 20 ಪ್ರಾಥಮಿಕ, ಪ್ರೌಢಶಾಲಾ ಕೊಠಡಿಗಳಿಗೆ ಹಾನಿಯಾಗಿದೆ. ತುರ್ತಾಗಿ ದುರಸ್ತಿ ಕಾರ್ಯ ಕೈಗೊಳ್ಳಬೇಕು. ವಾಯುಭಾರ ಕುಸಿತದಿಂದ ಅ. 16ರವರೆಗೆ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಂಭವನೀಯ ಹಾನಿ ತಡೆಗೆ ಅಽಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು.
ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ. ವೇದಿಕೆಯಲ್ಲಿದ್ದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಲೋಕೋಪಯೋಗಿ ಕೃಷಿ, ತೋಟಗಾರಿಕೆ ಇಲಾಖೆಗಳ ಅಽಕಾರಿಗಳು ಹಾಗೂ ತಹಸೀಲ್ದಾರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net