ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು

throwball
ಶಿರೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಬೈಂದೂರು ತಾಲೂಕು ಮಟ್ಟದ ಥ್ರೋಬಾಲ್ ಟೂರ್ನಿಯನ್ನು ಮಂಜುನಾಥ ಪೈ ಉದ್ಘಾಟಿಸಿದರು
Published on

ವಿಜಯವಾಣಿ ಸುದ್ದಿಜಾಲ ಬೈಂದೂರು

ಕ್ರೀಡೆ ಬದುಕಿನ ಅವಿಭಾಜ್ಯ ಅಂಗ. ಪಠ್ಯದ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳಲ್ಲಿ ಶಿಸ್ತು ಬೆಳೆಯುತ್ತದೆ ಎಂದು ಶಿರೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಂಜುನಾಥ ಪೈ ಹೇಳಿದರು. ಕಾಲೇಜು ಮೈದಾನದಲ್ಲಿ ಬೈಂದೂರು ತಾಲೂಕು ಮಟ್ಟದ ಪದವಿ ಪೂರ್ವ ಶಿಕ್ಷಣ ಇಲಾಖೆಯ 2024ನೇ ಸಾಲಿನ ಥ್ರೋಬಾಲ್ ಟೂರ್ನಿ ಉದ್ಘಾಟಿಸಿ ಮಾತನಾಡಿದರು.

ಪ್ರಭಾರ ಪ್ರಾಂಶುಪಾಲ ಮಲ್ಲಿಕಾರ್ಜುನಪ್ಪ ಬಿ.ಎನ್ ಅಧ್ಯಕ್ಷತೆ ವಹಿಸಿದ್ದರು. ಖಂಬದಕೋಣೆ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾ ಉಸ್ತುವಾರಿ ಗಣಪತಿ ಅವಭೃತ, ಕೊಲ್ಲೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾ ಮೇಲ್ವಿಚಾರಕ ಸುಕೇಶ್‌ಕುಮಾರ್ ಶೆಟ್ಟಿ ಹೊಸಮಠ, ನಾವುಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಸುಜಾತ ಎಂ, ಶಿರೂರು ಕಾಲೇಜಿನ ಉಪಪ್ರಾಂಶುಪಾಲ ಬೊಮ್ಮಯ್ಯ ಗಾಂವ್ಕರ್, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ರವೀಂದ್ರ ಶೆಟ್ಟಿ ಹೊಸ್ಮನೆ, ಸುಬ್ರಾಯ ನಾಯ್ಕ, ರವೀಂದ್ರ ಶೆಟ್ಟಿ ಹೊನ್ಕೇರಿ, ದಿನೇಶ ಕುಮಾರ್, ಮೋಹನ್ ರೇವಣ್ಕರ್ ಉಪಸ್ಥಿತರಿದ್ದರು. ಉಪನ್ಯಾಸಕಿ ಡಾ.ಸುಮಯ್ಯ ಸ್ವಾಗತಿಸಿದರು. ಸೌಜನ್ಯ ವಂದಿಸಿದರು. ಉಪನ್ಯಾಸಕ ಮಂಜುನಾಥ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net