ಮನಸ್ಸು ನಿಯಂತ್ರಣದಲ್ಲಿದ್ದಾಗ ಶಿಸ್ತು ಮೂಡಲು ಸಾಧ್ಯ

blm
Published on

ಕಾರ್ಕಳ: ಮನುಷ್ಯ ತನ್ನನ್ನು ದೈಹಿಕವಾಗಿ ಮಾನಸಿಕವಾಗಿ ನಿಯಂತ್ರಣದಲ್ಲಿ ಇರಿಸಿಕೊಳ್ಳುವುದೇ ಶಿಸ್ತು. ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಂಡಾಗ ಮಾತ್ರ ಶಿಸ್ತು ಮೂಡಲು ಸಾಧ್ಯ, ಜೀವನದಲ್ಲಿ ಶಿಸ್ತು ಇದ್ದರೆ ನಮ್ಮ ಬದುಕಿಗೆ ಸೌಂದರ್ಯ ಮತ್ತು ಅರ್ಥ ಬರುತ್ತದೆ. ಮಕ್ಕಳು ಸೈನ್ಯ ಸೇರಿ ದೇಶ ಸೇವೆ ಮಾಡುವ ಮನೋಧರ್ಮ ರೂಢಿಸಿಕೊಳ್ಳಬೇಕು ಎಂದು ನಿವೃತ್ತ ಏರ್ ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್ ಹೇಳಿದರು.

ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ನಡೆದ ಶಿಸ್ತು ಮತ್ತು ಜೀವನ ಎಂಬ ವಿಚಾರದ ಕುರಿತಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪನ್ಯಾಸಕರು ಉಪಸ್ಥಿತರಿದ್ದರು. ಉಪಪ್ರಾಚಾರ್ಯ ಪ್ರಕಾಶ್ ಭಟ್ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net