ವಿದ್ಯಾರ್ಥಿಗಳಲ್ಲಿ ಶಿಸ್ತು ಮುಖ್ಯ

hn 27-4
Published on

ವಿಜಯಪುರ: ವಿದ್ಯಾರ್ಥಿಗಳಲ್ಲಿ ಜವಾಬ್ದಾರಿ ಮತ್ತು ದೇಶಪ್ರೇಮ ಮುಖ್ಯ ಅದನ್ನು ಎನ್‌ಸಿಸಿಯಿಂದ ಕಲಿಯಬಹುದು ಎಂದು ಬಿಎಲ್‌ಡಿಇ ಸಂಸ್ಥೆ ಆಡಳಿತಾಧಿಕಾರಿ ಐ.ಎಸ್.ಕಾಳಪ್ಪನವರ ಹೇಳಿದರು.

ನಗರದ ಎಸ್‌ಎಸ್ ಪದವಿಪೂರ್ವ ಕಾಲೇಜಿನಲ್ಲಿ 75ನೇ ಎನ್‌ಸಿಸಿ ದಿನಾಚರಣೆ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಜಾತ್ಯತೀತತೆ ಮತ್ತು ನಿಸ್ವಾರ್ಥ ಸೇವೆಯ ಆದರ್ಶಗಳನ್ನು ಪ್ರಚಾರ ಮಾಡುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಎನ್‌ಸಿಸಿ ಆಂದೋಲನವು ವಿವಿಧತೆಯಲ್ಲಿ ಏಕತೆಯನ್ನು ಪ್ರತಿನಿಧಿಸುತ್ತದೆ. ಇದು ನಮ್ಮ ಮಹಾನ್ ರಾಷ್ಟ್ರ ದ ಮೂಲವಾಗಿದೆ ಎಂದು ತಿಳಿಸಿದರು.

ಪ್ರಾಚಾರ್ಯ ಜಿ.ಡಿ.ಅಕಮಂಚಿ ಮಾತನಾಡಿ, ಎನ್‌ಸಿಸಿ ಎಂದರೆ ಶಿಸ್ತು. ವಿದ್ಯಾರ್ಥಿ ಜೀವನದಲ್ಲಿ ಎನ್‌ಸಿಸಿಯಲ್ಲಿ ಪಾಲ್ಗೊಳ್ಳುವುದರ ಮೂಲಕ ಅವರು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಎಸ್.ಎ.ಪಾಟೀಲ್ ನೇತೃತ್ವದಲ್ಲಿ ರಕ್ತದಾನ ಶಿಬಿರ ನಡೆಯಿತು. 18 ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು. ಸ್ವಚ್ಛ ಭಾರತ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಎನ್‌ಸಿಸಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದ್ದರು. ಕ್ಯಾಪ್ಟನ್ ಹಮೀದ್ ಟಿ.ಎಂ, ಎಸ್.ಎ.ಪಾಟೀಲ್ ಬಿದರಕುಂದಿ, ಡಿ.ಎನ್.ರಾಠೋಡ, ಎಸ್.ಟಿ.ತೆಲಕರ್, ಮಾಂತೇಶ್ ಕನ್ನೂರ್ ಇನ್ನಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net