ಶಿಸ್ತುಬದ್ಧ ಜೀವನ ನಡೆಸಲಿ

9
ಚಿಕ್ಕೋಡಿಯಲ್ಲಿ ಹಮ್ಮಿಕೊಂಡಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮದಲ್ಲಿ ಡಾ.ಬಿ.ಎಂ. ತುರಡಗಿ ಅವರು ಪರಿಮಳ ವಾರ್ಷಿಕ ಪತ್ರಿಕೆ ಬಿಡುಗಡೆಗೊಳಿಸಿದರು. ಎನ್.ಎಸ್. ವಂಟಮುತ್ತೆ, ಎಸ್.ಎಸ್. ಕವಲಾಪುರೆ ಇದ್ದರು.
Published on

ಚಿಕ್ಕೋಡಿ: ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ನಾಯಕತ್ವ ಗುಣ ಬೆಳೆಯಲು ಸಹಾಯಕ ಎಂದು ಅತಿಥಿ ಉಪನ್ಯಾಸಕ ಡಾ.ಬಿ.ಎಂ. ತುರಡಗಿ ಹೇಳಿದರು.

ಪಟ್ಟಣದ ಕೆಎಲ್‌ಇ ಸಂಸ್ಥೆ ಬಸವಪ್ರಭು ಕೋರೆ ಪದವಿ ಮಹಾವಿದ್ಯಾಲಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸಿ ದೇಶ ಹೆಮ್ಮೆಪಡುವಂತೆ ಸಾಧನೆ ಮಾಡಬೇಕು. ಯುವಜನರು ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಂಡು ಶಿಸ್ತುಬದ್ಧ ಜೀವನ ನಡೆಸಬೇಕು ಎಂದರು.

ಪ್ರಾಚಾರ್ಯ ಡಾ.ಬಿ.ಜಿ. ಕುಲಕರ್ಣಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಸಂವಹನ ಕೌಶಲ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಕಾಲೇಜಿನಿಂದ ಪರಿಮಳ ವಾರ್ಷಿಕ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಕಾಲೇಜು ಒಕ್ಕೂಟದ ಉಪಾಧ್ಯಕ್ಷ ಜೆ.ಎಲ್. ಕದಂ, ಆರ್. ಆರ್. ನಾಯಕ, ಲೆಫ್ಟಿನಂಟ್ ಸಿದ್ದಣ್ಣ ನಾಯಕ, ಎಂ.ಬಿ. ರೊಟ್ಟಿ, ಸ್ಥಾನಿಕ ಆಡಳಿತ ಮಂಡಳಿ ಸದಸ್ಯ ಎನ್.ಎಸ್. ವಂಟಮುತ್ತೆ, ಎಸ್.ಎಸ್. ಕವಲಾಪುರೆ, ದೈಹಿಕ ಶಿಕ್ಷಣ ನಿರ್ದೇಶಕ ಪ್ರವೀಣ ವಾಘಮೋರೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net