

ಧಾರವಾಡ: ನಗರದ ಶ್ರೀಮತಿ ವಿ.ಪಿ.ಹಂಚಿನಮನಿ ಅಂತರಾಷ್ಟ್ರೀಯ ವಸತಿ ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ವತಿಯಿಂದ 10ನೇ ತರಗತಿ ಮಕ್ಕಳಿಗೆ ಅ. 20, 21ರಂದು ಧಾರವಾಡ ವಿಭಾಗದ ಮಟ್ಟದ ಅನ್ವೇಷಣೆ 2023-24 ಎರಡು ದಿನಗಳ ಶಿಬಿರ ಆಯೋಜಿಸಲಾಗಿದೆ.
ಅ. 20ರಂದು ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಜಿಲ್ಲಾ ಯೋಜನಾ ಉಪಸಮನ್ವಯಧಿಕಾರಿ ಎಸ್.ಎಂ. ಹುಡೇದಮನಿ ಶಿಬಿರಕ್ಕೆ ಚಾಲನೆ ನೀಡುವರು. ಅ. 21ರಂದು ಸಂಜೆ 3 ಗಂಟೆಗೆ ಸಮಾರೋಪ ಸಮಾರಂಭದಲ್ಲಿ ನಡೆಯಲಿದ್ದು, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನಫರಮೇಷನ್ ಟೆಕ್ನಾಲಜಿ ರಿಜಿಸ್ಟ್ರಾರ್ ಡಾ.ಚೆನ್ನಪ್ಪ ಅಕ್ಕಿ, ಶಾಂತೇಶ ಎಜುಕೇಷನ್ ಸೊಸೈಟಿ ಕಾರ್ಯದರ್ಶಿ ಮನೋಜ ಹಂಚಿನಮನಿ ಅತಿಥಿಗಳಾಗಿ ಪಾಲ್ಗೊಳ್ಳುವರು. ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಶಿಕ್ಷಣ ವಿಭಾಗ ನಿರ್ದೇಶಕ ಪ್ರವೀಣಕುಮಾರ ಎಸ್. ಅಧ್ಯಕ್ಷತೆ ವಹಿಸಲಿದ್ದಾರೆ.
ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಅನ್ವೇಷಣೆ ನಡೆಯಲಿದ್ದು, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟ, ವಿಜಯಪುರ ಜಿಲ್ಲೆಗಳ 125 ಮಕ್ಕಳು ಹಾಗೂ 100 ಪಾಲಕರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.