ಕೋಳಿ ಅಂಕ ಬಗ್ಗೆ ಚರ್ಚಿಸಿ ತೀರ್ಮಾನ: ಶಾಸಕ ಅಶೋಕ್ ರೈ ಹೇಳಿಕೆ

Ism_koli-anka
Published on

ಪುತ್ತೂರು: ತುಳುನಾಡಿನ ಧಾರ್ಮಿಕ ಕಾರ್ಯಕ್ರಮ ಸಂದರ್ಭ ಕೋಳಿ ಅಂಕಕ್ಕೆ ಮಹತ್ವವಿದ್ದರೂ ಸ್ಪಲ್ಪಮಟ್ಟಿಗೆ ಬ್ರೇಕ್ ಹಾಕಲಾಗಿದೆ. ಈ ವಿಚಾರದಲ್ಲಿ ಎಲ್ಲರೂ ಒಪ್ಪಿಗೆ ಕೊಟ್ಟರೆ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಿ ಕೋಳಿ ಅಂಕವನ್ನು ಮುಂದುವರಿಸುವ ಇರಾದೆ ಇದೆ. ಆದರೆ ಯುವಕರೆಲ್ಲರೂ ಕೆಲಸ ಬಿಟ್ಟು ಕೋಳಿ ಅಂಕಕ್ಕೆ ಹೋಗುವ ಪ್ರಮೇಯ ಎದುರಾಗಬಾರದು ಎಂದು ಶಾಸಕ ಅಶೋಕ್‌ಕುಮಾರ್ ರೈ ಹೇಳಿದರು.

ಪಡುಮಲೆ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಸಭಾಭವನದಲ್ಲಿ ನಡೆದ ‘ಕೆಸರ್‌ಡ್ ಒಂಜಿ ದಿನ’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಬಡಗನ್ನೂರು ಗ್ರಾ.ಪಂ ಸದಸ್ಯ ರವಿರಾಜ್ ರೈ ಸಜಂಕಾಡಿ, ರೈ ಎಜ್ಯುಕೇಶನಲ್ ಆ್ಯಂಡ್ ಚಾರಿಟೆಬಲ್ ಟ್ರಸ್ಟ್‌ನ ನಿಹಾಲ್ ಶೆಟ್ಟಿ, ಪುರಂದರ ರೈ ಕುದ್ಕಾಡಿ, ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಮನೋಜ್ ರೈ ಪೇರಾಲು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿವಾಸ ಭಟ್ ಚಂದುಕೂಡ್ಲು, ಗಣೇಶೋತ್ಸವ ಸಮಿತಿ ಅಧ್ಯಕ್ಷ ಜನಾರ್ದನ ಪೂಜಾರಿ ಪದಡ್ಕ, ರಾಕೇಶ್ ರೈ ಕುದ್ಕಾಡಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net