ಚರ್ಚಿಸಿ ಚಾಮುಂಡಿಬೆಟ್ಟದಲ್ಲಿ ರೋಪ್‌ವೇ ನಿರ್ಮಾಣ

mysore
Published on

ಮೈಸೂರು; ಮೈಸೂರಿನ ಚಾಮುಂಡಿಬೆಟ್ಟದಲ್ಲಿ ರೋಪ್‌ವೇ ನಿರ್ಮಾಣ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿದ್ದು, ಸಂಬಂಧಪಟ್ಟ ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.


ರೋಪ್‌ವೇ ನಿರ್ಮಾಣ ಕುರಿತು ಪರ-ವಿರೋಧ ಅಭಿಪ್ರಾಯ ಇದೆ. ಆದ್ದರಿಂದ ಸಾಧಕ-ಬಾಧಕಗಳನ್ನು ಚರ್ಚಿಸಿದ ನಂತರ ತೀರ್ಮಾನ ಮಾಡಲಾಗುವುದು. ಚಾಮುಂಡೇಶ್ವರಿ ದೇವಾಲಯದ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಮಾಡಲಾಗುವುದು. ಜತೆಗೆ ಪ್ರಸಾದ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಬಿಡುಗಡೆಯಾಗಿರುವ 40 ಕೋಟಿ ರೂ. ಅನುದಾನದಲ್ಲಿ ಚಾಮುಂಡಿಬೆಟ್ಟದ ಅಭಿವೃದ್ಧಿಗೆ ಕ್ರಮ ತೆಗೆದುಕೊಳ್ಳಲಾಗುವುದು ಹೇಳಿದರು.


ಯುನೆಸ್ಕೋ ಮಾನ್ಯತೆ ಪಡೆದಿರುವ ಸೋಮನಾಥಪುರ ಚೆನ್ನಕೇಶವ ದೇವಾಲಯಕ್ಕೆ ಮೂಲಸೌಕರ್ಯಗಳ ಕೊರತೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಒಂದೇ ಬಾರಿಗೆ ಮೂಲಸೌಕರ್ಯ ಕಲ್ಪಿಸಲು ಸಾಧ್ಯವಿಲ್ಲ. ಹಂತ ಹಂತವಾಗಿ ವಿವಿಧ ಸೌಲಭ್ಯ ಒದಗಿಸಲಾಗುವುದು.

ಈ ದೇವಾಲಯಕ್ಕೆ ಏಕೆ ಬಸ್ ಸೌಲಭ್ಯ ಕಡಿಮೆಯಾಗಿದೆ ಎಂಬುದರ ಮಾಹಿತಿ ಇಲ್ಲ. ನಾನು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಯೊಂದಿಗೆ ಮಾತನಾಡುತ್ತೇನೆ. ಸೋಮನಾಥಪುರಕ್ಕೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ರೀತಿ ಮಾಡಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net