ಅಧಿವೇಶನಕ್ಕೆ ಮುನ್ನ ಹುಬ್ಬಳ್ಳಿ ಕೈಗಾರಿಕೆಗಳ ಚರ್ಚೆ

h26-Shettar 1
Published on

ಹುಬ್ಬಳ್ಳಿ: ಮುಂಬರುವ ವಿಧಾನ ಮಂಡಲಗಳ ಅಧಿವೇಶನಕ್ಕೆ ಮುನ್ನ ಹುಬ್ಬಳ್ಳಿ-ಧಾರವಾಡದಲ್ಲಿ ಸ್ಥಾಪನೆಯಾಗಲಿರುವ ಮತ್ತೆ ಆಗಬೇಕಿರುವ ಕೈಗಾರಿಕೆಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಕಸ್, ಯುಫ್ಲೆಕ್ಸ್ ಕೈಗಾರಿಕೆಗಳ ಸ್ಥಾಪನೆಯಾಗಿ ಕಾರ್ಯಾರಂಭ ಮಾಡಿವೆ. ಎಫ್​ಎಂಸಿಜಿ ಕ್ಲಸ್ಟರ್ ಸ್ಥಾಪನೆ ಬಾಕಿ ಇದೆ. ಸ್ಥಾಪನೆಗೆ ಅಗತ್ಯವಿರುವ ಕ್ರಮ ಕೈಗೊಳ್ಳುವ ಸಂಬಂಧ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹಾಗೂ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗುವುದು ಎಂದರು.

ಈ ಭಾಗದಲ್ಲಿ ಎಫ್​ಎಂಸಿಜಿ ಕ್ಲಸ್ಟರ್ ಬಂದರೆ, ಲಕ್ಷಾಂತರ ಉದ್ಯೋಗ ಸೃಷ್ಟಿಯಾಗಲಿದೆ. ನಿರುದ್ಯೋಗ ಸಮಸ್ಯೆ ನಿವಾರಣೆ ಆಗಲಿದೆ. ಇನ್ನಷ್ಟು ಹೊಸ ಕೈಗಾರಿಕೆಗಳನ್ನು ಈ ಭಾಗಕ್ಕೆ ತರುವ ಕುರಿತು ಮಾತನಾಡಲಾಗುವುದು ಎಂದರು.

ಚರ್ಚೆ: ಜಗದೀಶ ಶೆಟ್ಟರ್ ನಿವಾಸಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ಭೇಟಿ ನೀಡಿದರು. ಈ ವೇಳೆ ಜಗದೀಶ ಶೆಟ್ಟರ್ ಅವರು ಶಾಲು ಹೊದಿಸಿ ಸನ್ಮಾನಿಸಿದರು. ನಂತರ ಚರ್ಚೆ ನಡೆಸಿದರು.

ಶಿಲ್ಪಾ ಜಗದೀಶ ಶೆಟ್ಟರ್, ವಾಕರಸಾ ಸಂಸ್ಥೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಸಾವಕಾರ, ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಹೇಶ ದಾಬಡೆ, ಭಾರತಿ ಟಪಾಲ್, ಬಂಗಾರೇಶ ಹಿರೇಮಠ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net