ಅರಣ್ಯ ಅತಿಕ್ರಮಣದಾರರ ಸಮಸ್ಯೆ ಬಗ್ಗೆ ಚರ್ಚೆ

25sirsi6- kageri letter
Published on

ಶಿರಸಿ: ಜಿಲ್ಲೆಯ ಅರಣ್ಯವಾಸಿಗಳ ಸಮಸ್ಯೆ ಕುರಿತು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದ್ರ ಯಾದವ ಅವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗುರುವಾರ ಭೇಟಿಯಾಗಿ ಸಮಸ್ಯೆಯ ಬಗ್ಗೆ ವಿವರಿಸಿದರು.
ಅನುಸೂಚಿತ ಬುಡಕಟ್ಟುಗಳ ಮತ್ತು ಇತರ ಅರಣ್ಯವಾಸಿಗಳ ಹಕ್ಕುಗಳನ್ನು ಮಾನ್ಯ ಮಾಡುವ 2006ರ ಅಧಿನಿಯಮ ಅರಣ್ಯ ಅತಿಕ್ರಮಣದಾರರಿಗೆ ತೊಂದರೆ ಆಗುತ್ತಿದೆ. ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರಣ್ಯ ಅತಿಕ್ರಮಣದಾರರಿದ್ದು, ಅವರಿಗೆ ನ್ಯಾಯ ಒದಗಿಸಬೇಕಾಗಿದೆ ಎಂದರು. ಈ ಕುರಿತು ಪರಿಶೀಲಿಸಿ ಸ್ಪಂದಿಸುವುದಾಗಿ ಅರಣ್ಯ ಸಚಿವರು ಭರವಸೆ ನೀಡಿದರು.
ಜಯಂತ್ಯುತ್ಸವದಲ್ಲಿ ಭಾಗಿ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು ಹಾಗೂ ದೆಹಲಿ ಪ್ರದೇಶ ಶರಣ ಸಾಹಿತ್ಯ ಪರಿಷತ್ ಆಯೋಜಿಸಿದ್ದ ವಚನ ಸಂಶೋಧಕ ಪಿತಾಮಹ ಡಾ. ಫ.ಗು. ಹಳಕಟ್ಟಿ ಅವರ ಜಯಂತ್ಯುತ್ಸವದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲ್ಗೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net