ಮುಖಂಡ, ಕಾರ್ಯಕರ್ತರ ಜತೆ ಚರ್ಚೆ

Discussion with leaders and workers
ಜಮಖಂಡಿ ಕ್ಷೇತ್ರದ ಮಾಜಿ ಶಾಸಕ ಆನಂದ ನ್ಯಾಮಗೌಡ ನಿವಾಸಕ್ಕೆ ಬಾಗಲಕೋಟೆ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಭೇಟಿ ನೀಡಿ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಚರ್ಚಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವರ್ಧಮಾನ ನ್ಯಾಮಗೌಡ, ಕಲ್ಲಪ್ಪ ಗಿರಡ್ಡಿ, ಮುಖಂಡ ಬಿ.ಎಸ್. ಸಿಂಧೂರ ಇತರರಿದ್ದರು.
Published on

ಜಮಖಂಡಿ: ಕ್ಷೇತ್ರದ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರ ನಿವಾಸಕ್ಕೆ ಬಾಗಲಕೋಟೆ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಮಂಗಳವಾರ ಭೇಟಿ ನೀಡಿ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು.

ಬಾಗಲಕೋಟೆ ಲೋಕಸಭೆ ಕ್ಷೇತ್ರದ ಅಭಿವೃದ್ಧಿಗಾಗಿ ಜನರು ಈ ಬಾರಿ ಬದಲಾವಣೆ ಬಯಸುತ್ತಿದ್ದಾರೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು, ಅಭಿವೃದ್ಧಿಪರ ಅಲೆ, ಮಹಿಳೆಯರ ಸಬಲೀಕರಣದ ಗ್ಯಾರಂಟಿ ಯೋಜನೆಗಳೇ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದು ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ಕಾಂಗ್ರೆಸ್ ಪಕ್ಷ ದೇಶದ ಬಡ ಜನರ ಹಿತ ಕಾಪಾಡುವ ನಿಟ್ಟಿನಲ್ಲಿ ಆಡಳಿತ ನಡೆಸಿಕೊಂಡು ಬಂದಿದೆ. ಅನೇಕ ಅಭಿವೃದ್ಧಿ ಪರ ಯೋಜನೆಗಳ ರೂಪುರೇಷೆಗಳನ್ನು ಹಾಕಿಕೊಂಡಿದ್ದು, ಅವುಗಳು ಸಾಕಾರಗೊಳ್ಳಲು ನಮ್ಮ ಪಕ್ಷಕ್ಕೆ ಬಹುಮತ ಸಿಗುವಂತೆ ಮತದಾರರು ಆಶೀರ್ವಾದ ಮಾಡಬೇಕು ಎಂದರು.
ನನ್ನ ಗೆಲುವು ನಿಶ್ಚಿತ. ಕ್ಷೇತ್ರದ ಮನೆಮಗಳಾಗಿ ಕೆಲಸ ಮಾಡಲು ಒಂದು ಬಾರಿ ಆಶೀರ್ವಾದ ನೀಡಬೇಕೆಂದು ಮನವಿ ಮಾಡಿದರು.

ಮಾಜಿ ಶಾಸಕ ಆನಂದ ನ್ಯಾಮಗೌಡ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಅವರಿಗೆ ನಮ್ಮ ಕ್ಷೇತ್ರದಿಂದ 10 ಸಾವಿರಕ್ಕೂ ಅಧಿಕ ಮತಗಳ ಲೀಡ್ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವರ್ಧಮಾನ ನ್ಯಾಮಗೌಡ, ಕಲ್ಲಪ್ಪ ಗಿರಡ್ಡಿ, ಮುಖಂಡರಾದ ಬಿ.ಎಸ್. ಸಿಂಧೂರ, ಈಶ್ವರ ಕರಬಸನವರ, ಸಿದ್ದು ಮೀಶಿ, ದಾನೇಶ ಘಾಟಗೆ, ಬಸವರಾಜ ನ್ಯಾಮಗೌಡ, ರವಿ ಯಡಹಳ್ಳಿ, ಅನ್ವರ ಮೋಮಿನ್, ಮಹೇಶ ಕೋಳಿ, ಬಸವರಾಜ ಹರಕಂಗಿ, ಮೀರಾ ಒಂಟಮೋರೆ, ರೋಹಿತ ಸೂರ್ಯವಂಶಿ, ಅಬೂಬಕರ್ ಕುಡಚಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net