ಅರಿವಿನಿಂದ ರೋಗಗಳ ನಿಯಂತ್ರಣ

health day
ಉಡುಪಿಯಲ್ಲಿ ಆಯೋಜಿಸಿದ್ದ ವಿಶ್ವ ಆರೋಗ್ಯ ದಿನಾಚರಣೆಯನ್ನು ಶ್ಯಾಮಲಾ ಸಿ.ಕೆ. ಉದ್ಘಾಟಿಸಿದರು.
Published on

ವಿಜಯವಾಣಿ ಸುದ್ದಿಜಾಲ ಉಡುಪಿ

ಜನರಿಗೆ ಸಾವಾನ್ಯ ಆರೋಗ್ಯದ ಕುರಿತಾಗಿಯೂ ಅರಿವು ಮೂಡಿಸುವುದು ಇಂದಿನ ಅಗತ್ಯವಾಗಿದೆ. ಆರೋಗ್ಯದ ಅರಿವಿನಿಂದ ಹಲವು ರೋಗಗಳು ಬರದಂತೆ ತಡೆಯಲು ಸಾಧ್ಯ. ಸದೃಢ ಆರೋಗ್ಯಕ್ಕಾಗಿ ಸೂಕ್ತ ಆಹಾರ, ನಿದ್ರೆ, ಮನೋನಿಗ್ರಹ ಅತಿ ಅಗತ್ಯ ಎಂದು ಎ.ವಿ.ಬಾಳಿಗಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಕಾವ್ಯಾ ಟಿ. ಮಾಹಿತಿ ನೀಡಿದರು.

ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಉಡುಪಿ ಜಿಲ್ಲೆ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ‘ವಿಶ್ವ ಆರೋಗ್ಯ ದಿನ’ ಕಾರ್ಯಕ್ರಮದಲ್ಲಿ ಆರೋಗ್ಯ ವಿಚಾರವಾಗಿ ಉಪನ್ಯಾಸ ನೀಡಿದರು.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ಕಾರ್ಯಕ್ರಮ ಉದ್ಘಾಟಿಸಿದರು. ಇಲಾಖೆಯ ಕಾರ್ಯಕ್ರಮಗಳ ಕುರಿತು ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ರತ್ನಾ ಸುವರ್ಣ ವಾಹಿತಿ ನೀಡಿದರು. ರೆಡ್‌ಕ್ರಾಸ್ ಉಪಸಭಾಪತಿ ಡಾ.ಅಶೋಕಕುವಾರ ವೈ.ಜಿ. ಅಧ್ಯಕ್ಷತೆ ವಹಿಸಿದ್ದರು. ರೆಡ್‌ಕ್ರಾಸ್ ಆಡಳಿತ ಮಂಡಳಿ ಸದಸ್ಯ ಚಂದ್ರಶೇಖರ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಇವಾಖೆ ಯೋಜನಾಧಿಕಾರಿ ಶಿವಾಜಿ, ವಿಕಲಚೇತನ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಜಯಶ್ರೀ ಉಪಸ್ಥಿತರಿದ್ದರು. ರೆಡ್‌ಕ್ರಾಸ್ ಜಿಲ್ಲಾ ಕಾರ್ಯದರ್ಶಿ ಡಾ.ಗಣನಾಥ ಎಕ್ಕಾರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಖಜಾಂಚಿ ರವಾದೇವಿ ವಂದಿಸಿದರು.

ಜನರ ಬದುಕಿನ ಮೇಲೆ ಇಂದು ತಾಂತ್ರಿಕತೆಯ ಪ್ರಭಾವ ಹೆಚ್ಚಾಗುತ್ತಿದೆ. ಅದರಿಂದಲೂ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಎಲ್ಲ ವಲಯಗಳಲ್ಲೂ ಕೆಲಸದ ಒತ್ತಡದಿಂದ ಅನಾರೋಗ್ಯಕ್ಕೆ ಈಡಾಗುತ್ತಿರುವುದು ಅಧ್ಯಯನಗಳಿಂದಲೂ ತಿಳಿದುಬಂದಿದೆ. ಶ್ಯಾಮಲಾ ಸಿ.ಕೆ. ಉಪನಿರ್ದೇಶಕಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net