ಜನರಿಗೆ ಆರೋಗ್ಯದ ಅರಿವು ಮೂಡಿಸಿ

Untitled design (11)
ಕುರುಗೋಡಿನಲ್ಲಿ ಏರ್ಪಡಿಸಿದ್ದ ಸಮುದಾಯ ಆಧಾರಿತ ತಪಾಸಣಾ ಶಿಬಿರದಲ್ಲಿ ವೈದ್ಯಾಧಿಕಾರಿ ರೂಪಾ ಜಾಲಿಹಾಳ್, ಮೆಹಬೂಬ್ ಭಾಷಾ, ನೇತ್ರಾವತಿ, ಸುಭಾನ್, ಶೇಖರ್, ಶರಣಬಸವ, ಲಕ್ಷ್ಮೀ ಇನ್ನಿತರರಿದ್ದರು.
Published on

ಕುರುಗೋಡು: ರೋಗಗಳನ್ನು ಮೊದಲ ಹಂತದಲ್ಲೇ ಗುರುತಿಸಿ ಚಿಕಿತ್ಸೆ ಪಡೆಯುವುದರಿಂದ ಗುಣಪಡಿಸಬಹುದಾಗಿದೆ ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರೂಪಾ ಜಾಲಿಹಾಳ್ ಹೇಳಿದರು.

ಪ್ರಾಥಮಿಕ ಹಂತದಲ್ಲಿ ಆರೋಗ್ಯ ಗುರುತಿಸಿ

ಪಟ್ಟಣದ ಗಣಿಕೆಹಾಳ್ ರಸ್ತೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ಹಮ್ಮಿಕೊಂಡಿದ್ದ ಸಮುದಾಯ ಆಧಾರಿತ ತಪಾಸಣಾ ಶಿಬಿರಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು. ಜಾತ್ರೆ-ಸಂತೆ ಸ್ಥಳಗಳಲ್ಲಿ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸುವುದರಿಂದ ಜನರಿಗೆ ಆರೋಗ್ಯ ಅರಿವು ಮೂಡಿಸಲು ಸಹಾಯವಾಗುತ್ತದೆ. ಸಮುದಾಯ ಆಧಾರಿತ ಸ್ಕ್ರೀನಿಂಗ್ ಆರಂಭಿಕ ಹಂತದಲ್ಲಿ ರೋಗಗಳನ್ನು ಗುರುತಿಸಬಹುದಾಗಿದೆ ಎಂದರು.

ತುರ್ತು ಪರಿಸ್ಥಿತಿಯಲ್ಲಿ ರಕ್ತದ ಅವಶ್ಯಕತೆ ಇದ್ದು, ಪ್ರತಿಯೊಬ್ಬರು ರಕ್ತದಾನ ಮಾಡಲು ಮುಂದಾಗಬೇಕು. ಪುರುಷರು ಮೂರು ಹಾಗೂ ಮಹಿಳೆಯರು ನಾಲ್ಕು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದೆ ಎಂದು ಹೇಳಿದರು. ಜನರಿಗೆ ವಿವಿಧ ಆರೋಗ್ಯ ತಪಾಸಣೆ ಮಾಡಲಾಯಿತು.
ಪ್ರಮುಖರಾದ ನರಸಮ್ಮ, ಗೌರಮ್ಮ, ಸದಾನಂದ,ಶಾರದ, ಕೆಂಚಮ್ಮ ಆಶಾಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net