ರೋಗ ತಡೆಗೆ ಆಯುರ್ವೇದ ಸಹಕಾರಿ

23 LNG 02
ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಪ್ರಾಚಾರ್ಯ ಡಾ.ರಾಜಶೇಖರ ಸಸಿಗೆ ನೀರೆರೆದು ಉದ್ಘಾಟಿಸಿದರು. ಆಯುಷ್ ವೈದ್ಯರಾದ ಖಾಜಾ ಮೈನುದ್ದಿನ್, ಡಿ.ಎಚ್.ಹುಲ್ಲೂರು, ಹೀರಾಬಾಯಿ, ಶ್ವೇತಾ, ಆರೋಗ್ಯ ನಿರೀಕ್ಷಕ ಪ್ರಾಣೇಶ ಜೋಷಿ ಇತರರಿದ್ದರು.
Published on

ಲಿಂಗಸುಗೂರು: ಭಾರತೀಯ ಇತಿಹಾಸದಲ್ಲಿ ಆಯುರ್ವೇದ ಅತ್ಯಂತ ಪ್ರಾಚೀನ ವೈದ್ಯಕೀಯ ವ್ಯವಸ್ಥೆಯಾಗಿದೆ ಎಂದು ಸ್ವಾಮಿ ವಿವೇಕಾನಂದ ಆಯುರ್ವೇದ ಕಾಲೇಜು ಪ್ರಾಚಾರ್ಯ ಡಾ.ರಾಜಶೇಖರ ಹೇಳಿದರು.

ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಯ ನಿರ್ದೇಶನಾಲಯ, ಜಿಪಂ, ಆಯುಷ್ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಾಚೀನ ಚಿಕಿತ್ಸಾ ವ್ಯವಸ್ಥೆ ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಆಯುಷ್ ಸಚಿವಾಲಯ 2016 ರಲ್ಲಿ ರಾಷ್ಟ್ರೀಯ ಆಯುರ್ವೇದ ದಿನವನ್ನಾಗಿ ಘೋಷಿಸಿತು. ಆಯುರ್ವೇದ ಚಿಕಿತ್ಸಾ ವ್ಯವಸ್ಥೆ ದೇಹ, ಮನಸ್ಸು ಮತ್ತು ಆತ್ಮದ ನಡುವೆ ಸಮತೋಲನ ಕಾಯ್ದುಕೊಂಡು ರೋಗಗಳನ್ನು ತಡೆಗಟ್ಟುವಿಕೆಗೆ ಸಹಕಾರಿಯಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net