ಗ್ರಾಮ ಪಂಚಾಯತಿಯಿಂದ ಮಹಾನೀಯರಿಗೆ ಅಪಮಾನ

8 TKE 4
Published on

ತರೀಕೆರೆ: ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಬೇಲೇನಹಳ್ಳಿ ಗ್ರಾಪಂ ಕಚೇರಿಯಲ್ಲಿ ಮಹಾನೀಯರ ಭಾವಚಿತ್ರ ಅಳವಡಿಸಿಲ್ಲ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಗ್ರಾಪಂ ಎದುರು ಪ್ರತಿಭಟಿಸಿದರು.

ಕರವೇ (ಪ್ರವೀಣ್‌ಶೆಟ್ಟಿ ಬಣ) ತಾಲೂಕು ಯುವ ಘಟಕದ ಅಧ್ಯಕ್ಷ ಇಮ್ರಾನ್ ಖಾನ್ ಮಾತನಾಡಿ, ಗ್ರಾಪಂ ಕಳೆದ ಮೂರು ವರ್ಷಗಳಿಂದ ಸಂಬಂಧಪಟ್ಟ ಇಲಾಖೆ ಅನುಮತಿ ಪಡೆಯದೆ ಬೇಲೇನಹಳ್ಳಿ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿನ ಅಧಿಕಾರಿಗಳು ಗಾಂಧೀಜಿ, ಅಂಬೇಡ್ಕರ್ ಹಾಗೂ ಬಸವಣ್ಣನವರ ಭಾವಚಿತ್ರ ಅಳವಡಿಸದೆ ಮಹಾನೀಯರನ್ನು ಅಪಮಾನ ಮಾಡಿದ್ದಾರೆ ಎಂದು ದೂರಿದರು.

ತಹಸೀಲ್ದಾರ್ ವಿಶ್ವಜೀತ ಮೆಹತಾ ಹಾಗೂ ಇಒ ಡಾ.ಆರ್.ದೇವೇಂದ್ರಪ್ಪ ಗ್ರಾಪಂ ಆಡಳಿತ ಮಂಡಳಿ ಹಾಗೂ ಪ್ರತಿಭಟನಾಕಾರರೊಂದಿಗೆ ಚರ್ಚಿಸಿ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿನ ನ್ಯೂನ್ಯತೆಯನ್ನು 15 ದಿನಗಳೊಳಗೆ ಸರಿಪಡಿಸುವುದಾಗಿ ತಿಳಿಸಿದರು. ಕರವೇ (ಪ್ರವೀಣ್ ಶೆಟ್ಟಿ ಬಣದ) ಜಿಲ್ಲಾಧ್ಯಕ್ಷ ರಮೇಶ, ಗ್ರಾಮಸ್ಥ ಸಂತೋಷ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net