ಆ.26ರಂದು ಎಚ್‌ಡಿಕೆ ನೇತೃತ್ವದಲ್ಲಿ ದಿಶಾ ಸಮಿತಿ ಸಭೆ: ಕಾಂಗ್ರೆಸ್ ಶಾಸಕರು ಗೈರು ಸಾಧ್ಯತೆ?

hdk
Published on

ಮಂಡ್ಯ: ಸಂಸದರೂ ಆದ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಆ.26ರಂದು ನಗರದಲ್ಲಿ ಮೊದಲ ಬಾರಿಗೆ ದಿಶಾ ಸಮಿತಿ ಸಭೆ ಆಯೋಜಿಸಲಾಗಿದೆ.

ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ಸಭೆ ಆರಂಭಗೊಳ್ಳಲಿದೆ. 2018ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಇದೇ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದರು. ಕೆಲ ದಿನದ ಹಿಂದೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜನಸ್ಪಂದನಾ ಸಭೆ ನಡೆಸಿ ಸಾರ್ವಜನಿಕರಿಂದ ಆಹ್ವಾನ ಸ್ವೀಕರಿಸಿದ್ದರು. ಆದರೆ ರಾಜ್ಯಸರ್ಕಾರದ ಆದೇಶದ ಮೇರೆಗೆ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿರಲಿಲ್ಲ.

ಭಾಗವಹಿಸುತ್ತಾರಾ ಕಾಂಗ್ರೆಸ್ ಶಾಸಕರು?: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ನಡೆಸಲಿರುವ ದಿಶಾ ಸಮಿತಿ ಸಭೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಭಾಗವಹಿಸುವರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಪೂರ್ವನಿಯೋಜಿತ ಕಾರ್ಯಕ್ರಮಕ್ಕೆಂದು ವಿದೇಶಕ್ಕೆ ತೆರಳಿದ್ದಾರೆ. ಆದ್ದರಿಂದ ಉಳಿದ ಶಾಸಕರು ಹಾಗೂ ಎಂಎಲ್‌ಸಿಗಳು ಭಾಗವಹಿಸಲಿದ್ದಾರೆಯೇ ಎನ್ನುವುದನ್ನು ನೋಡಬೇಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net