ಮಂಡ್ಯ: ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ ಸಮಿತಿ) ಸಭೆಯನ್ನು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಜು.4ರಂದು ಬೆಳಗ್ಗೆ 11ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.