ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಧ್ಯಕ್ಷತೆಯಲ್ಲಿ ಸೆ.13ರಂದು ದಿಶಾ ಸಮಿತಿ ಸಭೆ

Screenshot_2025-09-10-19-59-32-26.jpg
Published on

ಧಾರವಾಡ: ಕೇಂದ್ರದ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೆ.13ರಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆ ಆಯೋಜಿಸಲಾಗಿದೆ.

ಕೇಂದ್ರ ಪುರಸ್ಕೃತ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳು ಸಭೆಗೆ ಪ್ರಗತಿ ವರದಿಯೊಂದಿಗೆ ಭಾಗವಹಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net